ರಾಜ್ಯದಲ್ಲಿ ಹೆಚ್ಚುತ್ತಿದೆ ಕಾಲರಾ ಪ್ರಕರಣ: ಇಲ್ಲಿಯವರೆಗೆ 27 ಪ್ರಕರಣ ದೃಢ
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಲರಾ ಪ್ರಕರಣ ಹೆಚ್ಚಾಗುತ್ತಿದೆ. ಏಪ್ರಿಲ್ ತಿಂಗಳೊಂದರಲ್ಲೇ 21 ಕಾಲರಾ ಪ್ರಕರಣಗಳು ದೃಢಪಟ್ಟಿರುವುದು ವರದಿಯಾಗಿದೆ.
By : The Federal
Update: 2024-04-17 14:12 GMT
ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಲರಾ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ನೀರಿನ ಸಮಸ್ಯೆ ಹಾಗೂ ಬಿಸಿಲಿ ತೀವ್ರತೆ ಹೆಚ್ಚಾಗಿದೆ. ಇದರ ನಡುವೆ ಕಾಲರಾ ಪ್ರಕರಣಗಳು ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.
ಇಲ್ಲಿಯವರೆಗೆ (ಏಪ್ರಿಲ್ 17) ಕರ್ನಾಟಕದಲ್ಲಿ 27 ಕಾಲರಾ ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೇ ಹೆಚ್ಚು ಕಾಲರಾ ಪ್ರಕರಣಗಳು ದೃಢಪಟ್ಟಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 13 ಕಾಲರಾ ಪ್ರಕರಣ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ 10, ಮೈಸೂರಿನಲ್ಲಿ 3 ಹಾಗೂ ರಾಮನಗರದಲ್ಲಿ ಒಂದು ಕಾಲರಾ ಪ್ರಕರಣ ದೃಢಪಟ್ಟಿರುವುದು ವರದಿಯಾಗಿದೆ. ಇದೇ ತಿಂಗಳಿನಲ್ಲಿ 21 ಪ್ರಕರಣಗಳು ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮುನ್ನೆಚ್ಚರಿಕೆ ಕ್ರಮಗಳು
ಕಾಲರಾ ಸೋಂಕಿನ ಲಕ್ಷಣಗಳು