Paddy Procurement | ಭತ್ತ ಖರೀದಿ ಕೇಂದ್ರ ಆರಂಭಿಸಲು ಸಿಎಂ ಸೂಚನೆ
ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ಹಾಗೂ ರೈತ ಮುಖಂಡರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಮನವಿ ಮಾಡಿದ್ದಾರೆ.
By : The Federal
Update: 2024-11-10 12:05 GMT
ಭತ್ತದ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ಹಾಗೂ ರೈತ ಮುಖಂಡರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಮನವಿ ಮಾಡಿದ್ದಾರೆ. ಬಳ್ಳಾರಿ, ಹೊಸಪೇಟೆ, ರಾಯಚೂರು, ಯಾದಗಿರಿ ಭಾಗದಲ್ಲಿ ಭತ್ತದ ಕೊಯ್ಲು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಅಲ್ಲದೆ ಭತ್ತದ ಬೆಲೆ ಕುಸಿದಿರುವುದರಿಂದ ಭತ್ತದ ಖರೀದಿ ಕೇಂದ್ರಗಳನ್ನುಆರಂಭಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದರು.
ಈ ವೇಳೆ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಕೂಡಲೇ ಭತ್ತದ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಸೂಚಿಸಿದ್ದಾರೆ. ಬೆಂಬಲ ಬೆಲೆ ಖರೀದಿ ಕೇಂದ್ರಗಳು ಶುರುವಾಗಿದೆ, ಬೆಲೆ ಕುಸಿದು ರೈತರಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ತಕ್ಷಣವೇ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಜನವರಿವರೆಗೆ ಕಾಯಬೇಡಿ ಎಂದು ಸೂಚನೆ ನೀಡಿದ್ದಾರೆ.