ತುಮಕೂರು ಕ್ರಿಕೆಟ್‌ ಕ್ರೀಡಾಂಗಣ ಶಂಕುಸ್ಥಾಪನೆ | ಬಿಜೆಪಿಯ ಸವಾಲಿಗೂ ಬ್ಯಾಟ್‌ ಬೀಸಿದ ಸಿಎಂ!

ತುಮಕೂರಿನಲ್ಲಿ ಸೋಮವಾರ ಕ್ರಿಕೆಟ್‌ ಬ್ಯಾಟ್‌ ಬೀಸುವ ಮೂಲಕ ನೂತನ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೇ ವೇಳೆ ಬಿಜೆಪಿಯ ಪ್ರತಿಭಟನೆಯ ಸವಾಲಿಗೂ ಬ್ಯಾಟ್‌ ಬೀಸಿದರು!

Update: 2024-12-02 10:02 GMT

ತುಮಕೂರಿನಲ್ಲಿ ಸೋಮವಾರ ಕ್ರಿಕೆಟ್‌ ಬ್ಯಾಟ್‌ ಬೀಸುವ ಮೂಲಕ ನೂತನ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೇ ವೇಳೆ ಬಿಜೆಪಿಯ ಪ್ರತಿಭಟನೆಯ ಸವಾಲಿಗೂ ಬ್ಯಾಟ್‌ ಬೀಸಿದರು!

ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸೋಮವಾರ ಬ್ಯಾಟಿಂಗ್ ಮಾಡುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ತುಮಕೂರು ಹೊರವಲಯ ಸೋರೆಕುಂಟೆ ಸಮೀಪದ ಪಿ.ಗೊಲ್ಲಹಳ್ಳಿಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಲಾಗುತ್ತಿದೆ.

ಕ್ರೀಡಾಂಗಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದೆ. ಎರಡು ವರ್ಷದಲ್ಲಿ ಕ್ರೀಡಾಂಗಣ ನಿರ್ಮಾಣ ಪೂರ್ಣಗೊಂಡು, ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್ ಪಂದ್ಯಾವಳಿಗಳಿಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿಯೂ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಜಾಗ ನೀಡುವಂತೆ ಕೋರಿದೆ. ಸೂಕ್ತ ಜಾಗ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಬಿಜೆಪಿ ಬೆದರಿಕೆಗೆ ಹೆದರಲ್ಲ

ತುಮಕೂರು ಜಿಲ್ಲಾ ಪ್ರವಾಸದ ವೇಳೆ ಪ್ರತಿಭಟನೆ ನಡೆಸಲು ಹಣದ ಆಮಿಷ ತೋರಿಸಿ ಮುಜುಗರಕ್ಕೆ ಒಳಗಾಗಿರುವ ಗ್ರಾಮಾಂತರ ಶಾಸಕ ಸುರೇಶ್ ಗೌಡಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆಯಲ್ಲೇ ಟಾಂಗ್ ಕೊಟ್ಟರು.

ನಾನು 41 ವರ್ಷದಿಂದ ಮಂತ್ರಿ ಆಗಿದ್ದೇನೆ. ಎರಡು ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಇಂತಹ ಬೆದರಿಕೆಗಳಿಗೆ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗುತ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ತುಮಕೂರಿನ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಮರ್ಪಕ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಾಂತರ ಶಾಸಕ ಬಿ.ಸುರೇಶ್ಗೌಡ ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪುಬಾವುಟ ಪ್ರದರ್ಶಿಸುವುದಾಗಿ ಹೇಳಿದ್ದರು. ಇದಲ್ಲದೇ ಕಾರ್ಯಕರ್ತರ ಸಭೆಯಲ್ಲಿ ಸಿಎಂ ವಿರುದ್ಧ ಧಿಕ್ಕಾರ ಕೂಗಿದವರಿಗೆ 1 ಲಕ್ಷ ಬಹುಮಾನ ನೀಡುವುದಾಗಿ ಹೇಳಿದ್ದ ಆಡಿಯೊ ವೈರಲ್ ಆಗಿ ತೀವ್ರ ಮುಜುಗರಕ್ಕೆ ಒಳಗಾಗಿದ್ದರು.

ತುಮಕೂರಿನಲ್ಲಿ ಮೂಲಸೌಕರ್ಯ, ಕೃಷಿ ಮತ್ತು ಕಲ್ಯಾಣ ಕಾರ್ಯಕ್ರಮಗಳು ಸೇರಿದಂತೆ ₹ 938 ಕೋಟಿ ವೆಚ್ಚದ ಕಾಮಗಾರಿಗಳಿಗೆ ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದರು. 66 ಹೊಸ ಕಾಮಗಾರಿಗಳನ್ನೂ ಉದ್ಘಾಟಿಸಿದ್ದಾರೆ.

Full View

Tags:    

Similar News