Siddaramaiah Hospitalized| ಸಿಎಂ ಸಿದ್ದರಾಮಯ್ಯ ದಿಢೀರ್ ಆಸ್ಪತ್ರೆಗೆ ದಾಖಲು; ಎರಡು ದಿನ ವಿಶ್ರಾಂತಿ
Siddaramaiah Hospitalized: ಸಿಎಂ ಸಿದ್ದರಾಮಯ್ಯ ಅವರು ಮಂಡಿ ನೋವಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದ್ದರಿಂದ ಅಧಿಕೃತ ಕಾರ್ಯಕ್ರಮಗಳು ರದ್ದಾಗಿವೆ.;
By : The Federal
Update: 2025-02-02 07:06 GMT
ಮುಖ್ಯಮಂತ್ರಿ ಸಿದ್ದರಾಮಯ್ಯ ದಿಢೀರ್ ಆಸ್ಪತ್ರೆಗೆ (Siddaramaiah Hospitalized) ದಾಖಲಾಗಿದ್ದಾರೆ. ಎಡಗಾಲಿನ ಮಂಡಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾದರು.
ತಪಾಸಣೆ ನಡೆಸಿದ ಡಾ. ಸತ್ಯನಾರಾಯಣ ಅವರು, ಈ ಹಿಂದೆ ಲಿಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.
ಎರಡು ದಿನ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲಾ ಪ್ರವಾಸ ರದ್ದುಗೊಂಡಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹೊಸೂರು ಗ್ರಾಮಕ್ಕೆ ಇಂದು ಸಿದ್ದರಾಮಯ್ಯಅವರು ಭೇಟಿ ನೀಡಬೇಕಿತ್ತು. ಹೀಗಾಗಿ ಹೆಚ್ಚಿನ ಭದ್ರತೆ ಕೂಡ ಮಾಡಲಾಗಿತ್ತು. 500 ಮಂದಿ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿತ್ತು.