CM on Corruption | ಭ್ರಷ್ಟಾಚಾರ ವಿರುದ್ಧ ಹೋರಾಡಲು ಸಿಎಂ ಸಿದ್ದರಾಮಯ್ಯ ಕರೆ
'ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರವು ಒಂದು ಪ್ರಮುಖ ಅಡಚಣೆಯಾಗಿದೆ ಎಂದು ನಾನು ನಂಬಿದ್ದೇನೆ. ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಬೆಂಬಲಿಸಬೇಕು' ಎಂದು ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.;
ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು 'ಜಾಗೃತಿ ಅರಿವು ಸಪ್ತಾಹ-2024'ರ ಆಚರಣೆ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಸಚಿವಾಲಯದ ಅಧಿಕಾರಿಗಳು ಮತ್ತು ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಜ್ಞಾ ವಿಧಿ ಬೋಧಿಸಿದರು.
'ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರವು ಒಂದು ಪ್ರಮುಖ ಅಡಚಣೆಯಾಗಿದೆ ಎಂದು ನಾನು ನಂಬಿದ್ದೇನೆ. ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಬೆಂಬಲಿಸಬೇಕು' ಎಂದು ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
'ಎಲ್ಲ ನಾಗರಿಕರು ಜಾಗರೂಕರಾಗಿ, ಎಲ್ಲ ಸಮಯದಲ್ಲೂ ಪ್ರಾಮಾಣಿಕತೆ, ನಿಷ್ಠೆಗೆ ಬದ್ದರಾಗಿರಬೇಕು. ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಬೆಂಬಲಿಸಬೇಕು ಎಂದೂ ನಾನು ಅರಿತಿದ್ದೇನೆ' ಎಂದು ಮುಖ್ಯಮಂತ್ರಿ ಹೇಳಿದರು.
'ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸರ್ಕಾರ, ನಾಗರಿಕರು ಮತ್ತು ಖಾಸಗಿ ವಲಯದವರು ಕೆಲಸ ಮಾಡಬೇಕು ಎಂದು ನಾನು ನಂಬಿದ್ದೇನೆ. ಲಂಚ ಪಡೆಯುವುದಿಲ್ಲ ಹಾಗೂ ನೀಡುವುದೂ ಇಲ್ಲ. ಸಾರ್ವಜನಿಕ ಹಿತಾಸಕ್ತಿಯಿಂದ ಕಾರ್ಯನಿರ್ವಹಿಸುತ್ತೇನೆ. ವೈಯಕ್ತಿಕ ನಡವಳಿಕೆಯಲ್ಲಿ ನಿಷ್ಠೆ ಪ್ರದರ್ಶಿಸುವ ಮೂಲಕ ಭ್ರಷ್ಟಾಚಾರದ ಘಟನೆಗಳನ್ನು ಸೂಕ್ತ ಸಂಸ್ಥೆಗೆ ವರದಿ ಮಾಡುತ್ತೇನೆ' ಎಂದೂ ಅವರು ಹೇಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಡಿಪಿಎಆರ್ ಕಾರ್ಯದರ್ಶಿ ಸತ್ಯವತಿ ಮುಂತಾದವರು ಮುಖ್ಯಮಂತ್ರಿಯಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.