ಸಿ.ಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು: ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಶೀಘ್ರವೇ ರಾಜಕೀಯ ಬೆಳವಣಿಗೆಗಳು ನಡೆಯಲಿದ್ದು, ಭ್ರಷ್ಟಾಚಾರ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

Update: 2024-10-10 11:54 GMT
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ
Click the Play button to listen to article

ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬೆಳವಣಿಗೆಗಳು ಖಂಡಿತವಾಗಿಯೂ ನಡೆಯುತ್ತಿವೆ. ಶೀಘ್ರದಲ್ಲೇ ಈ ಕುರಿತ ಸತ್ಯ ಜನರ ಮುಂದೆ ಬಹಿರಂಗಗೊಳ್ಳಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. 

ಬೆಳಗಾವಿಯಲ್ಲಿ ದಸರಾ ಹಬ್ಬದ ನಂತರ ಮುಖ್ಯಮಂತ್ರಿ ಬದಲಾವಣೆ ಎಂಬ ಅವರ ಇತ್ತೀಚಿನ ಹೇಳಿಕೆ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜಕೀಯ ಬೆಳವಣಿಗೆಗಳು ವೇಗದ ಗತಿಯಲ್ಲಿ ನಡೆಯುತ್ತಿದೆ. ರಾಜ್ಯದಲ್ಲಿ ಶೀಘ್ರವೇ ರಾಜಕೀಯ ಬೆಳವಣಿಗೆಗಳು ನಡೆಯಲಿದ್ದು, ಭ್ರಷ್ಟಾಚಾರ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು. 

ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಸರಾ ನಂತರ ರಾಜೀನಾಮೆ ನೀಡಬಹುದು ಎಂದು ವಿಜಯೇಂದ್ರ ಭಾನುವಾರ ಪ್ರತಿಪಾದಿಸಿದ್ದಾರೆ. ಸಿದ್ದರಾಮಯ್ಯ ಸಂಪುಟದ ಕೆಲವು ಸಚಿವರು ಸಭೆ ನಡೆಸಿ ನಾಯಕತ್ವ ಬದಲಾವಣೆ ಬಗ್ಗೆ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ನನ್ನನ್ನು ಅರ್ಥಮಾಡಿಕೊಳ್ಳಲು ಸಮಯ ಬೇಕು

ಬಿಜೆಪಿಯ ಹಲವಾರು ನಾಯಕರು ತಮ್ಮ ನಾಯಕತ್ವವನ್ನುಒಪ್ಪಿಕೊಳ್ಳದಿರುವುದು ಮತ್ತು ತಮ್ಮ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಪಕ್ಷ  ಹಿರಿಯರನ್ನು ಹೊಂದಿದ್ದರೂ, ಪಕ್ಷದ ನಾಯಕತ್ವವು ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸುವ ದೊಡ್ಡ ಜವಾಬ್ದಾರಿ ತನಗೆ ನೀಡಿದೆ. ಪಕ್ಷದ ಹಿರಿಯರು ನನ್ನನ್ನು ಅರ್ಥಮಾಡಿಕೊಳ್ಳಲು ಸ್ವಲ್ಪ ಸಮಯ ಬೇಕು. ಪಕ್ಷ ವಿರೋಧಿ ಚಟುವಟಿಕೆಗಳು ತಪ್ಪು ಎಂದು ಪರಿಗಣಿಸಿ ಎಲ್ಲರನ್ನು ಒಟ್ಟಿಗೆ ಕರೆದೊಯ್ಯುತ್ತೇನೆ ಎಂದು ನಾನು ಯಾವಾಗಲೂ ಹೇಳುತ್ತಿದ್ದೇನೆ, ಅವರಿಗೂ ಸ್ವಲ್ಪ ಸಮಯ ಬೇಕು, ಎಲ್ಲದಕ್ಕೂ ಸಮಯ ಬೇಕು. ಮುಂದಿನ ದಿನಗಳಲ್ಲಿ ಒಳ್ಳೆಯದಾಗಲಿದೆ ಎಂದು ಅವರು ಹೇಳಿದರು.  

ಹಿರಿಯ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ ಜಾರಕಿಹೊಳಿ ನೇತೃತ್ವದ ಬಿಜೆಪಿ ನಾಯಕರು ವಿಜಯೇಂದ್ರ ಅವರನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ಅವರು ಆಡಳಿತಾರೂಢ ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಹಾಗೂ ಬಿ.ವೈ.ವಿಜಯೇಂದ್ರ ತಮ್ಮ ತಂದೆ ಮತ್ತು ಪಕ್ಷದ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಪಕ್ಷವನ್ನು ತನ್ನ ಹಿಡಿತದಲ್ಲಿ ಇರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಯತ್ನಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು.

Tags:    

Similar News