Congress Unrest | ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಮುದಾಯದ ಶಾಸಕರ ಸಭೆ

ಸುರಪುರ ತಾಲ್ಲೂಕಿನ ಬಂಡೊಳ್ಳಿಯಲ್ಲಿ ಇರುವ 17 ಎಕರೆ 21 ಗುಂಟೆ ಜಾಗದಲ್ಲಿ ಶೈಕ್ಷಣಿಕ ಸಂಸ್ಥೆಗಳನ್ನು ಪ್ರಾರಂಭಿಸಲು ಸುಮಾರು 25 ಕೋಟಿ ರೂ.ಗಳ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು.;

Update: 2025-03-05 10:01 GMT

ಸತೀಶ್‌ ಜಾರಕಿಹೊಳಿ

ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆ ಕುರಿತ ಚರ್ಚೆ, ಬಣ ಜಗಳ ನಡೆಯುತ್ತಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಂಗಳವಾರ ರಾತ್ರಿ ಪರಿಶಿಷ್ಟ ಸಮುದಾಯಗಳ ಶಾಸಕರು ಸಭೆ ಸೇರಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಸಭೆಯಲ್ಲಿ ಎಸ್​​ಸಿ, ಎಸ್​ಟಿ ಸಮುದಾಯಗಳ ಶಾಸಕರು ಬೇಡಿಕೆ ಪಟ್ಟಿಯನ್ನೇ ಸಿದ್ಧಪಡಿಸಿದ್ದಾರೆ.

ಸಮುದಾಯದ ಬೇಡಿಕೆಗಳೇನು?

ಎಸ್​​ಸಿ, ಎಸ್​ಟಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿಕೊಳ್ಳುವುದು.

ಕರ್ನಾಟಕ ರಾಜ್ಯದಲ್ಲಿ ಒಂದು ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪಿಸುವುದು.

ಸುರಪುರ ತಾಲ್ಲೂಕಿನ ಬಂಡೊಳ್ಳಿಯಲ್ಲಿ ಇರುವ 17 ಎಕರೆ 21 ಗುಂಟೆ ಜಾಗದಲ್ಲಿ ಶೈಕ್ಷಣಿಕ ಸಂಸ್ಥೆಗಳನ್ನು ಪ್ರಾರಂಭಿಸಲು ಸುಮಾರು 25.00 ಕೋಟಿ ರೂ.ಗಳ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು.

ಪ್ರತೀ ವರ್ಷ ಸರ್ಕಾರದಿಂದ ಬುಡಕಟ್ಟು ವಾಲ್ಮೀಕಿ ಜನಾಂಗದ ಇತಿಹಾಸ, ಸಂಸ್ಕೃತಿ, ಕಲೆಗಳನ್ನು ಪ್ರೋತ್ಸಾಹಿಸಿ ಜನಗಳಿಗೆ ಪರಿಚಯಿಸುವುದು, ಚಿತ್ರದುರ್ಗದಲ್ಲಿ ದುರ್ಗೋತ್ಸವ ಎಂಬ ಕಾರ್ಯಕ್ರಮವನ್ನು ರಾಣಿಚನ್ನಮ್ಮ ಇತಿಹಾಸ ಬಿಂಬಿಸುವ ಕಿತ್ತೂರು ಉತ್ಸವ, ಹಂಪಿ ಉತ್ಸವ ಮಾದರಿಯಲ್ಲಿ ಆಯೋಜಿಸುವುದು. ಇದು ನಾಯಕರ ಪರಾಕ್ರಮಗಳ ಕಲೆಗಳನ್ನು ಬಿಂಬಿಸುವ ಸಾಂಸ್ಕೃತಿಕ ದುರ್ಗೋತ್ಸವ ಆಗಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸುವುದು.

ಇತ್ತೀಚೆಗೆ ರಾಯಚೂರಿನಲ್ಲಿ 25 ಮಂದಿ ಎಸ್‌ಸಿ/ ಎಸ್‌ಟಿ ಸಮುದಾಯದ ಹೋರಾಟಗಾರರ ಮೇಲೆ ಹೂಡಿದ ಕೇಸ್‌ಗಳನ್ನು ಸರ್ಕಾರ ತಕ್ಷಣ ಹಿಂತೆಗೆದುಕೊಳ್ಳಲು ಒತ್ತಾಯಿಸುವುದು.

ಬೆಂಗಳೂರಿನ ಬಸವನಗುಡಿಯಲ್ಲಿರುವ ಶಿವಭಕ್ತ ಬೇಡರ ಕಣ್ಣಪ್ಪ ಸ್ವಾಮಿ ದೇವಸ್ಥಾನ ಮಹರ್ಷಿ ವಾಲ್ಮೀಕಿ ಆಶ್ರಮ ಮಹಾಸಂಸ್ಥಾನಕ್ಕೆ ಹೊಂದಿಕೊಂಡಿರುವ ನಿವೇಶನವನ್ನು ಸರ್ಕಾರದಿಂದ ಮಂಜೂರು ಮಾಡಿಸುವ ಕುರಿತು ಒತ್ತಡ ಹೇರುವುದು.

ಪರಿಶಿಷ್ಟ ಪಂಗಡದ ಜನಾಂಗಕ್ಕೆ ಮೀಸಲಿಟ್ಟ ಹಣವು ದುರ್ಬಳಕೆಯಾಗದೇ ಸಮರ್ಪಕವಾಗಿ ಜನಾಂಗಕ್ಕೆ ತಲುಪಿಸಿ ನಿಗದಿತ ಅವಧಿಯೊಳಗೆ ಪೂರ್ತಿ ಹಣ ಖರ್ಚಾಗುವಂತೆ ನೋಡಿಕೊಳ್ಳುವುದು.

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಎಸ್​ಟಿ ಶಾಸಕರ ಸಭೆಯಲ್ಲಿ ಸಚಿವ ಕೆಎನ್ ರಾಜಣ್ಣ ಭಾಗಿಯಾಗಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಜೊತೆಗಿನ ಸಭೆಗೆ ಗೈರಾಗಿದ್ದ ಅವರು ಸಮುದಾಯದ ಸಭೆಯಲ್ಲಿ ಭಾಗಿಯಾಗಿದ್ದಾರೆ.

Tags:    

Similar News