ಬಾಲವಿವಾಹ, ಬಾಲ ಗರ್ಭಿಣಿಯರ ಪ್ರಕರಣ ತಡೆಗಟ್ಟಿ: ಅಧಿಕಾರಿಗಳಿಗೆ ಸಿಎಂ ತಾಕೀತು

ಬಾಲತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಿಎಂ ಗರಂ ಆಗಿದ್ದು, ಇಂಥ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Update: 2024-07-09 11:29 GMT
ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದ್ದು, ಬಾಲತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಿಎಂ ಗರಂ ಆಗಿದ್ದು, ಇಂಥ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಸಿಇಒಗಳು ಹಾಗೂ ಇಲಾಖಾವಾರು ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆಗೆ ಸಿಎಂ ಖಡಕ್ ಸೂಚನೆ ನೀಡಿದರು.

ರಾಜ್ಯದಲ್ಲಿ 2022-23ರ ಅವಧಿಯಲ್ಲಿ 13477 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿದ್ದು, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದು ಅವರು ತಿಳಿಸಿದರು.

ಬಾಲ ಗರ್ಭಿಣಿಯರಲ್ಲಿ ಬೆಂಗಳೂರು ನಗರ ಪ್ರಥಮ

ಅತಿ ಹೆಚ್ಚು ಬಾಲಗರ್ಭಿಣಿ ಪ್ರಕರಣಗಳಿಗೆ ಬೆಂಗಳೂರು ಪ್ರಥಮ ಸ್ಥಾನದಲ್ಲಿದೆ. ನಗರದಲ್ಲಿ 1,334 ಬಾಲ ಗರ್ಭಿಣಿ ಪ್ರಕರಣ ಪತ್ತೆಯಾಗಿದೆ. ಉಳಿದಂತೆ ಬೆಳಗಾವಿಯಲ್ಲಿ 986, ಮೈಸೂರಿನಲ್ಲಿ 943, ಚಿತ್ರದುರ್ಗ 806, ವಿಜಯಪುರ 769 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿವೆ.

ಕಲಬುರ್ಗಿ ಜಿಲ್ಲೆಯಲ್ಲಿ 764, ತುಮಕೂರಿನಲ್ಲಿ 689, ಮಂಡ್ಯದಲ್ಲಿ 647, ಬಾಗಲಕೋಟೆಯಲ್ಲಿ 567, ವಿಜಯನಗರ 507, ರಾಯಚೂರಲ್ಲಿ 493, ಯಾದಗಿರಿಯಲ್ಲಿ 481, ಬಳ್ಳಾರಿಯಲ್ಲಿ 459, ದಾವಣಗೆರೆಯಲ್ಲಿ 457, ಬೀದರ್ ನಲ್ಲಿ 412, ಕೋಲಾರದಲ್ಲಿ 396 ಮತ್ತು ಹಾಸನದಲ್ಲಿ 317 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ ಎಂಬ ಅಂಕಿಅಂಶವನ್ನು ನೀಡಲಾಗಿದೆ.

ಇನ್ನು ರಾಮನಗರದಲ್ಲಿ 267, ಚಿಕ್ಕಬಳ್ಳಾಪುರದಲ್ಲಿ 263, ಶಿವಮೊಗ್ಗದಲ್ಲಿ 247, ಹಾವೇರಿಯಲ್ಲಿ 246, ಚಿಕ್ಕಮಗಳೂರಲ್ಲಿ 242, ಕೊಪ್ಪಳದಲ್ಲಿ 228, ಬೆಂಗಳೂರು ಗ್ರಾಮಾಂತರದಲ್ಲಿ 216, ಚಾಮರಾಜನಗರದಲ್ಲಿ 180, ಧಾರವಾಡದಲ್ಲಿ 178, ಕೊಡಗುನಲ್ಲಿ 127 ಮತ್ತು ಗದಗ ಜಿಲ್ಲೆಯಲ್ಲಿ 105 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ. ಉತ್ತರ ಕನ್ನಡದಲ್ಲಿ 71, ದಕ್ಷಿಣ ಕನ್ನಡದಲ್ಲಿ 48 ಹಾಗೂ ಉಡುಪಿ ಜಿಲ್ಲೆಯಲ್ಲಿ 32 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ.

Tags:    

Similar News