Mysuru MUDA Scam| ಸಿದ್ದರಾಮಯ್ಯ ಬೆನ್ನಿಗೆ ನಿಂತ‌ ಕಾಂಗ್ರೆಸ್ ಹೈಕಮಾಂಡ್

Update: 2024-08-23 18:56 GMT

ಮುಡಾ‌ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಈಗ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸರ್ಕಾರದ‌ ಬೆನ್ನಿಗೆ ನಿಂತಿದೆ.

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ‌ನಾಯಕ ರಾಹುಲ್‌ ಗಾಂಧಿ ಅವರ ಜತೆ ದೆಹಲಿಯಲ್ಲಿ‌ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ರು  ಇತರ ಸಂಪುಟ‌ ಸಹೋದ್ಯೋಗಿಗಳು ನಡೆಸಿದ ಸಭೆ  ಬಳಿಕ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರ ಜತೆಗೆ ನಿಲ್ಲುವ ನಿರ್ಧಾರಕ್ಕೆ ಬಂದಿದೆ. ಹಾಗೂ ಬಿಜೆಪಿಯ ಹಾಗೂ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ರಾಜ್ಯಪಾಲರು ವರ್ತಿಸುತ್ತಿದ್ದು, ರಾಜಕೀಯ ಮತ್ತು ಕಾನೂನು ಹೋರಾಟಕ್ಕೆ‌ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರ ಬೆಂಬಲಿಸುವ ನಿರ್ಧಾರಕ್ಕೆ ಬರಲಾಯಿತು.

ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆಗೆ ಸಭೆ ನಡೆಸಿದ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಹಾಗೂ ಇತರ ಕಾಂಗ್ರೆಸ್ ನಾಯಕರು ಮಾಧ್ಯಮಗಳಿಗೆ ಸಭೆಯ ಬಗ್ಗೆ ಮಾಹಿತಿ ನೀಡಿದರು.

 ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, "ನಾವು ನಿಮ್ಮ ಜೊತೆಗಿದ್ದೇವೆ ಧೈರ್ಯದಿಂದ ಹೋರಾಟ ಮಾಡಿ, ಬಡವರ ಪರವಾಗಿ ಕಾರ್ಯಕ್ರಮ ರೂಪಿಸಿ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ಹೈಕಮಾಂಡ್ ನಾಯಕರು ನಮಗೆ ಅಭಯ ಕೊಟ್ಟಿದ್ದಾರೆ" ಎಂದು ಅವರು ಹೇಳಿದರು.

"ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಸರ್ಕಾರದ ಪರವಾಗಿ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ಜೊತೆಯಾಗಿ ನಿಂತಿವೆ. ಕರ್ನಾಟಕದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸಲು ಕಿರುಕುಳ ನೀಡುತ್ತಿರುವ ಬಗ್ಗೆ ನಮ್ಮ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರೂ ಸಹ ರಾಜ್ಯದ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ" ಎಂದರು.

"ಇಡೀ ದೇಶದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವ ದೊಡ್ಡ ರಾಜ್ಯ ಕರ್ನಾಟಕ ಇದನ್ನು ಅಭದ್ರಗೊಳಿಸುವ ಪ್ರಯತ್ನಿಲಾಗುತ್ತಿದೆ. ಇಲ್ಲಿ ಕೇವಲ ಮುಖ್ಯಮಂತ್ರಿಗಳನ್ನ ಮಾತ್ರ ಗುರಿ ಮಾಡುತ್ತಿಲ್ಲ. ಬಡವರಿಗಾಗಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನು ಗುರಿ ಮಾಡುತ್ತಿದ್ದಾರೆ" ಎಂದು ಹೇಳಿದರು.

ಆ. 29 ರ ನಂತರ ಪ್ರಾಸಿಕ್ಯೂಷನ್ ಗೆ ನೀಡಿರುವ ತಡೆಯಾಜ್ಞೆ ಕೊನೆಯಾಗಲಿದೆ ಆನಂತರ ಸರ್ಕಾರದ ನಡೆ ಹೇಗಿರಲಿದೆ ಎಂದು ಕೇಳಿದಾಗ "ನಮಗೆ ಕಾನೂನಿನ ಮೇಲೆ ಗೌರವವಿದೆ. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಅಸಂವಿಧಾನಿಕ. ಇದನ್ನು ರಾಜ್ಯಪಾಲರೇ ಮನದಟ್ಟು ಮಾಡಿಕೊಂಡು ವಾಪಾಸ್ ಪಡೆಯುವ ಕಾಲ ಬರಲಿದೆ" ಎಂದು ಸಿದ್ದರಾಮಯ್ಯ ತಿಳಿಸಿದರು.

Tags:    

Similar News