ಕಾಂಗ್ರೆಸ್ ಸೇಡಿನ ರಾಜಕಾರಣ ಮಾಡುತ್ತಿದೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್‌ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.;

Update: 2024-09-22 06:29 GMT
ನಿಖಿಲ್‌ ಕುಮಾರಸ್ವಾಮಿ
Click the Play button to listen to article

ಕಾಂಗ್ರೆಸ್‌ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಕೇಂದ್ರ ಸಚಿವರಾಗಿರುವುದನ್ನು ಕಾಂಗ್ರೆಸ್ ನಾಯಕರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರು ಸಾರ್ವಜನಿಕರ ಮುಂದೆ ದಾಖಲೆಗಳನ್ನು ಇಟ್ಟು ಮಾತನಾಡುತ್ತಾರೆ. ಹೀಗಾಗಿ ಕಾಂಗ್ರೆಸ್‌ ಅವರಿಗೆ ಹೆದರುತ್ತಿದೆ. ಹೀಗಾಗಿ ಕಾಂಗ್ರೆಸ್ ಅವರನ್ನು ಗುರಿಯಾಗಿಸುತ್ತಿದೆ ಅವರು ತಿಳಿಸಿದರು.

ಕುಮಾರಸ್ವಾಮಿ ವಿರುದ್ಧದ ಹಳೆಯ ಪ್ರಕರಣಗಳನ್ನು ಕೆದಕಲು ಕಾಂಗ್ರೆಸ್ ನಾಯಕರು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಇಡೀ ಸಚಿವ ಸಂಪುಟ ಕುಮಾರಸ್ವಾಮಿ ಅವರ ಪ್ರತಿಷ್ಠೆಗೆ ಧಕ್ಕೆ ತರಲು ಅವರ ವಿರುದ್ಧ ದಾಖಲೆಗಳನ್ನು ಹುಡುಕಲು ಪ್ರಯತ್ನಿಸುತ್ತಿದೆ ಎಂದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎಂದು ನಿಖಿಲ್ ಹೇಳಿದ್ದಾರೆ. ಈ ವಿಚಾರವನ್ನು ಈಗಾಗಲೇ ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಚರ್ಚಿಸಲಾಗಿದೆ. ರಾಜ್ಯದ ಬಿಜೆಪಿ ನಾಯಕರು ಕೂಡ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಉಪಚುನಾವಣೆಯ ದಿನಾಂಕಗಳು ಇನ್ನೂ ಪ್ರಕಟವಾಗಬೇಕಿದೆ ಎಂದು ಹೇಳಿದರು.

Tags:    

Similar News