ಸಚಿವ ಸ್ಥಾನಕ್ಕೆ ಆಗ್ರಹಿಸಿ ಗಲಾಟೆ : ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು

ಪ್ರತಿಭಟನೆ ಮುಕ್ತಾಯಗೊಂಡ ನಂತರವೂ ಪರಿಸ್ಥಿತಿ ತಿಳಿಯಾಗಲಿಲ್ಲ. ಮಾರನಬಸರಿ ಗ್ರಾಮದ ರವಿ ಅಬ್ಬಿಗೇರಿ ಎಂಬ ಮತ್ತೊಬ್ಬ ಕಾರ್ಯಕರ್ತ ಕಾಲಕಾಲೇಶ್ವರ ವೃತ್ತದ ಗೋಪುರದ ಮೇಲೆ ಹತ್ತಿ, ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು.

Update: 2025-11-22 11:43 GMT

ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Click the Play button to listen to article

ರೋಣ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಶುಕ್ರವಾರ ಇಲ್ಲಿನ ಕಾಲಕಾಲೇಶ್ವರ ವೃತ್ತದಲ್ಲಿ ನಡೆದ ಪ್ರತಿಭಟನೆಯು ಹೈಡ್ರಾಮಕ್ಕೆ ಸಾಕ್ಷಿಯಾಯಿತು. ಪ್ರತಿಭಟನೆ ವೇಳೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.

ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ತಮ್ಮ ನಾಯಕನಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ದಿಂಡೂರು ಗ್ರಾಮದ ಸಂಗಪ್ಪ ತೇಜಿ ಎಂಬುವವರು ಏಕಾಏಕಿ ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಮುಂದಾದರು. ತಕ್ಷಣ ಎಚ್ಚೆತ್ತ ಇತರ ಕಾರ್ಯಕರ್ತರು ಮತ್ತು ಪೊಲೀಸರು ಅವರ ಕೈಯಲ್ಲಿದ್ದ ಡೀಸೆಲ್ ಕ್ಯಾನ್ ಕಸಿದುಕೊಂಡು ಅನಾಹುತ ತಪ್ಪಿಸಿದರು.

ಪ್ರತಿಭಟನೆ ನಂತರವೂ ಮುಂದುವರಿದ ಆತಂಕ

ಪ್ರತಿಭಟನೆ ಮುಕ್ತಾಯಗೊಂಡ ನಂತರವೂ ಪರಿಸ್ಥಿತಿ ತಿಳಿಯಾಗಲಿಲ್ಲ. ಮಾರನಬಸರಿ ಗ್ರಾಮದ ರವಿ ಅಬ್ಬಿಗೇರಿ ಎಂಬ ಮತ್ತೊಬ್ಬ ಕಾರ್ಯಕರ್ತ ಕಾಲಕಾಲೇಶ್ವರ ವೃತ್ತದ ಗೋಪುರದ ಮೇಲೆ ಹತ್ತಿ, ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಮಧ್ಯಪ್ರವೇಶಿಸಿ ಅವರನ್ನು ತಡೆದು ರಕ್ಷಿಸಿದರು.

ಆತ್ಮಹತ್ಯೆಗೆ ಯತ್ನಿಸಿದ ಸಂಗಪ್ಪ ಮತ್ತು ರವಿ ಅವರು, "ನಮ್ಮ ನಾಯಕರಾದ ಜಿ.ಎಸ್. ಪಾಟೀಲ ಅವರಿಗೆ ಪಕ್ಷದಲ್ಲಿ ಪದೇ ಪದೇ ಅನ್ಯಾಯವಾಗುತ್ತಿದೆ. ಈ ಬಾರಿಯಾದರೂ ಅವರಿಗೆ ಸಚಿವ ಸ್ಥಾನ ನೀಡಲೇಬೇಕು. ಇಲ್ಲದಿದ್ದರೆ ನಾವು ಅವರಿಗಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧ," ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags:    

Similar News