8ನೇ ಶೆಡ್ಯೂಲ್‌ಗೆ ಸೇರ್ಪಡೆ | ತುಳು ಭಾಷಿಗರ ಭಾವನೆಗಳ ಅರಿವಿದೆ: ಕೇಂದ್ರ ಸರ್ಕಾರ

ತುಳು ಭಾಷೆ ಸೇರಿದಂತೆ ಇತರ ಭಾಷೆಗಳನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಜನರ ಭಾವನೆಯ ಬಗ್ಗೆ ಸರಕಾರಕ್ಕೆ ಅರಿವಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದರು.;

Update: 2024-08-07 10:38 GMT
ಕೇಂದ್ರ ಗೃಹ ಸಚಿವ ನಿತ್ಯಾನಂದ ರಾಯ್‌
Click the Play button to listen to article

ತುಳು ಭಾಷೆ ಸೇರಿದಂತೆ ಇತರ ಕೆಲವು ಭಾಷೆಗಳನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಕುರಿತ ಜನರ ಭಾವನೆಯ ಬಗ್ಗೆ ಸರ್ಕಾರಕ್ಕೆ ಅರಿವಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್‌ ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದರು. 

ದಕ್ಷಿಣಕನ್ನಡ ಬಿಜೆಪಿ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜನರ ಭಾವನೆಗಳು ಮತ್ತು ಇತರ ಸಂಬಂಧಿತ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಇಂತಹ ವಿನಂತಿಗಳನ್ನು ಪರಿಗಣಿಸಬೇಕು. ಭಾರತದ ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಒಟ್ಟು 22 ಭಾಷೆಗಳನ್ನು ಸೇರಿಸಲಾಗಿದೆ. ತುಳು ಸೇರಿದಂತೆ ಹಲವು ಭಾಷೆಗಳನ್ನು ಸಂವಿಧಾನದ ಎಂಟನೇ ಶೆಡ್ಯೂಲ್‌ಗೆ ಸೇರಿಸಲು ಕಾಲಕಾಲಕ್ಕೆ ಬೇಡಿಕೆಗಳು ಬಂದಿವೆ ಎಂದು ಅವರು ತಿಳಿಸಿದರು. 

ಯಾವುದೇ ಭಾಷೆಯನ್ನು ಸಂವಿಧಾನದ ಎಂಟನೇ ಶೆಡ್ಯೂಲ್‌ಗೆ ಸೇರಿಸಲು ಯಾವುದೇ ನಿಗದಿತ ಮಾನದಂಡಗಳಿಲ್ಲ. ಉಪಭಾಷೆಗಳು ಮತ್ತು ಭಾಷೆಗಳ ವಿಕಸನವು ಸಾಮಾಜಿಕ-ಸಾಂಸ್ಕೃತಿಕ, ಆರ್ಥಿಕ ಮತ್ತು ರಾಜಕೀಯ ಬೆಳವಣಿಗೆಗಳಿಂದ ಪ್ರಭಾವಿತವಾಗಿರುವ ಕ್ರಿಯಾತ್ಮಕ ಪ್ರಕ್ರಿಯೆಯಾಗಿದೆ. ಭಾಷೆಗಳನ್ನು ಸಂವಿಧಾನದ ಎಂಟನೇ ಶೆಡ್ಯೂಲ್‌ಗೆ ಸೇರಿಸಲು ಯಾವುದೇ ಭಾಷಾ ಮಾನದಂಡವನ್ನು ನಿಗದಿಪಡಿಸುವುದು ಕಷ್ಟ. ಪಹ್ವಾ (1996) ಮತ್ತು ಸೀತಾಕಾಂತ್ ಮೊಹಾಪಾತ್ರ (2003) ಸಮಿತಿಗಳ ಮೂಲಕ ಇಂತಹ ನಿಶ್ಚಿತ ಮಾನದಂಡಗಳನ್ನು ವಿಕಸನಗೊಳಿಸಲು ಹಿಂದಿನ ಪ್ರಯತ್ನಗಳು ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

Tags:    

Similar News