CAFE BLAST | ಅಗತ್ಯ ಬಿದ್ದರೆ ತನಿಖೆ ಎನ್.ಐ.ಎ ಗೆ: ಮುಖ್ಯ ಮಂತ್ರಿ ಸಿದ್ದರಾಮಯ್ಯ

ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್.ಐ.ಎ ಗೆ ವಹಿಸುವ ಬಗ್ಗೆ ಅಗತ್ಯ ಬಿದ್ದರೆ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Update: 2024-03-04 06:53 GMT
ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್.ಐ.ಎ ಗೆ ಒಪ್ಪಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
Click the Play button to listen to article

ಚಿಕ್ಕಮಗಳೂರು: ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆ  ಯೋಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಮೇಶ್ವರ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಆರೋಪಿ ಇನ್ನೂ ಸಿಕ್ಕಿಲ್ಲ ಎಂದರು.

ಬಾಂಬ್ ಸ್ಫೋಟ ಪ್ರಕರಣ ಸಿಲ್ಲಿ ಘಟನೆಗಳಲ್ಲ

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಇದೊಂದು ಸಿಲ್ಲಿ ಘಟನೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಾಂಬ್ ಸ್ಫೋಟ ಪ್ರಕರಣ ಸಿಲ್ಲಿ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದರು.

ಬಿಜೆಪಿ ಕಾಲದಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು

ಬ್ರಾಂಡ್ ಬೆಂಗಳೂರು ಈಗ ಬಾಂಬ್ ಬೆಂಗಳೂರು ಆಗಿದೆ ಎಂದು ಬಿಜೆಪಿ ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರ ಕಾಲದಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು. 2008 ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು ಎಂದು ಕೇಳಿದರು. ಇದು ಎನ್.ಐ.ಎ, ರಾ ಅವರ ವೈಫಲ್ಯವಲ್ಲವೇ ಎಂದು ಪ್ರಶ್ನಿಸಿದರು.

ನಾನು ಬಾಂಬ್ ಸ್ಪೋಟವನ್ನು ಖಂಡಿಸುತ್ತೇನೆ. ಬಿಜೆಪಿಯವರು ರಾಜಕೀಯ ಮಾಡಬಾರದು ಎಂದರು. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಹಾಗೂ ಬಿಜೆಪಿ ಕಚೇರಿ ಮುಂದೆಯೇ ಸ್ಫೋಟವಾಗಿತ್ತು.ಆಗ ಬಿಜೆಪಿ ಅಧಿಕಾರದಲ್ಲಿತ್ತು ಎಂದರು.

Tags:    

Similar News