Power Tariff Hike | ಗ್ರಾಹಕರಿಗೆ ಕರೆಂಟ್ ಶಾಕ್; ವಿದ್ಯುತ್ ದರ ಯೂನಿಟ್‌ಗೆ 36 ಪೈಸೆ ಹೆಚ್ಚಿಸಿದ ಕೆಇಆರ್‌ಸಿ
ಎಸ್ಕಾಂ ಸಿಬ್ಬಂದಿಗೆ ಪಿಂಚಣಿ ಹಾಗೂ ಗ್ರಾಚುಯಿಟಿ ಹಣವನ್ನು ಗ್ರಾಹಕರಿಂದ ವಸೂಲಿ ಮಾಡುವ ಸಲುವಾಗಿಕೆಇಆರ್ ಸಿ, ವಿದ್ಯುತ್ ದರವನ್ನು ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ ಆದೇಶಿಸಿದೆ;
ಬೆಲೆ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕೆಇಆರ್‌ಸಿ) ವಿದ್ಯುತ್ ದರ ಏರಿಸಿ ಶಾಕ್ ನೀಡಿದೆ. ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡುವ ಮೂಲಕ ದರ ಏರಿಕೆ ಮಾಡಿದೆ. ಹೊಸ ದರಗಳು ಏ.1 ರಿಂದ ಅನ್ವಯವಾಗಲಿವೆ.
ಎಸ್ಕಾಂ ಸಿಬ್ಬಂದಿಗೆ ಪಿಂಚಣಿ ಹಾಗೂ ಗ್ರಾಚುಯಿಟಿ ಹಣವನ್ನು ಗ್ರಾಹಕರಿಂದ ವಸೂಲಿ ಮಾಡುವ ಸಲುವಾಗಿಕೆಇಆರ್ ಸಿ, ವಿದ್ಯುತ್ ದರವನ್ನು ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ ಆದೇಶಿಸಿದೆ.
ವಿದ್ಯುತ್ ದರ ಏರಿಕೆ ಕುರಿತು ಪ್ರತಿಕ್ರಿಯಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು, ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಗೃಹಜ್ಯೋತಿ ಯೋಜನೆಯಿಂದ ಆಗಿರುವ ನಷ್ಟ ಸರಿದೂಗಿಸಲು ಬೆಲೆ ಏರಿಕೆ ಮಾಡಿಲ್ಲ. ಸಾಮಾನ್ಯ ಪ್ರಕ್ರಿಯೆಯಂತೆ 36 ಪೈಸೆ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.
200 ಯೂನಿಟ್ ಒಳಗೆ ವಿದ್ಯುತ್ ಬಳಸುವವರಿಗೆ ಇದರಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ಅದಕ್ಕಿಂತ ಹೆಚ್ಚು ಬಳಸಿದವರಿಗೆ ಹೊಸ ದರ ಏರಿಕೆ ಅನ್ವಯವಾಗುತ್ತದೆ. ಇನ್ನು ದರ ಏರಿಕೆಯಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ. ಕೆಇಆರ್‌ಸಿ ಸ್ವಾಯತ್ತ ಸಂಸ್ಥೆಯಾಗಿದ್ದು, ವಿವೇಚನೆಯಿಂದ ದರ ಏರಿಕೆ ಮಾಡಿದೆ ಎಂದು ಹೇಳಿದ್ದಾರೆ.
ಒಂದರ ಹಿಂದೆ ಒಂದು ದರ ಏರಿಕೆ
ಕೆಎಸ್ಆರ್‌ಟಿಸಿ ಹಾಗೂ ಬಿಎಂಟಿಸಿ ಪ್ರಯಾಣ ದರ ಏರಿಕೆ ಬೆನ್ನಲ್ಲೇ "ನಮ್ಮ ಮೆಟ್ರೋ" ಪ್ರಯಾಣ ದರವನ್ನು ಏರಿಕೆ ಮಾಡಲಾಗಿತ್ತು. ಇದರಿಂದ ಸಾರ್ವಜನಿಕರು ಸಂಕಷ್ಟಕ್ಕೆ ಒಳಗಾಗಿದ್ದು, ಈಗ ಮತ್ತೆ ವಿದ್ಯುತ್ ದರ ಏರಿಸುವ ಮೂಲಕ ಬರೆ ಎಳೆದಿದೆ.
ಆಟೊ ಪ್ರಯಾಣ ದರ ಏರಿಕೆಗೂ ಸಮ್ಮತಿ ನೀಡುವ ಮೂಲಕ ಜನಸಾಮಾನ್ಯರಿಗೆ ಸರ್ಕಾರ ಬೆಲೆ ಏರಿಕೆಯ ಬರೆ ಎಳೆದಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.