ಕಾಂಗ್ರೆಸ್‌ ಭ್ರಷ್ಟರಿಗೆ ಸೈಲ್‌ ಹಾದಿ ನಿಶ್ಚಿತ: ಬಿ.ವೈ. ವಿಜಯೇಂದ್ರ ಕಿಡಿ

ರಾಜ್ಯ ಸರ್ಕಾರದ ಭ್ರಷ್ಟರೆಲ್ಲರೂ ಸತೀಶ್ ಸೈಲ್ ಹಾದಿಯನ್ನೇ ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

Update: 2024-10-25 14:22 GMT

ಬೇಲೆಕೇರಿ ಅದಿರು ಸಾಗಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಏಳು ಮಂದಿಯನ್ನು ಅಪರಾಧಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಅವರು, ಸರ್ಕಾರದ ಭ್ರಷ್ಟರೆಲ್ಲರೂ ದೋಷಿ ಸತೀಶ್ ಸೈಲ್ ಹಾದಿಯನ್ನೇ ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ ಎಂದಿದ್ದಾರೆ.

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಈ ನೆಲದ ಕಾನೂನು ಎಷ್ಟು ಗಟ್ಟಿ ಎಂಬುದನ್ನು ನಿರೂಪಿಸಿದೆ. ಇದೇ ರೀತಿಯ ತೀರ್ಪು ಮುಡಾ ಹಗರಣ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭ್ರಷ್ಟಾಚಾರ ಎದುರಿಸುತ್ತಿರುವವರ ಮುಖಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ತಿಳಿಸಿದ್ದಾರೆ.

ಅಕ್ರಮ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ 200 ಕೋಟಿ ರೂ. ಗೂ ಹೆಚ್ಚು ನಷ್ಟ ಉಂಟು ಮಾಡಿರುವ ಆರೋಪದ ಮೇಲೆ ಆರು ಮಂದಿ ಅಪರಾಧಿಗಳು ಜೈಲು ಸೇರಿದ್ದಾರೆ. ಶಾಸಕ ಸತೀಶ್ ಸೈಲ್ ವಿರುದ್ಧ ಬಂದಿರುವ ತೀರ್ಪಿನಂತೆ ಮುಂದೆ ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಸತೀಶ್‌ ಸೈಲ್‌ ಅವರನ್ನು ಹಿಂಬಾಲಿಸಲಿದ್ದಾರೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ. ಮುಡಾ ಹಗರಣ ಕುರಿತು ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿ ಎತ್ತಿ ಹಿಡಿದಿರುವ ಹೈಕೋರ್ಟ್, ಹಗರಣದ ಕುರಿತಾದ ಉಲ್ಲೇಖಗಳನ್ನು ನಮೂದಿಸಿದೆ. ಈ ನಿಟ್ಟಿನಲ್ಲಿ ಇಡಿ ಹಾಗೂ ಲೋಕಾಯುಕ್ತದಲ್ಲಿ ತನಿಖೆಯೂ ಸಾಗಿದೆ. ಈಗಲಾದರೂ ಸಿಎಂ ಸಿದ್ದರಾಮಯ್ಯ ಅವರು ಭಂಡತನ ಬಿಟ್ಟು ಎಚ್ಚೆತ್ತುಕೊಳ್ಳಬೇಕು. ನೈತಿಕತೆ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದರೆ ಭವಿಷ್ಯತ್ತಿನಲ್ಲಿ ಅವರಿಗೆ ಕಿಂಚಿತ್ತಾದರೂ ಗೌರವ ಉಳಿಯಲಿದೆ. ಇಲ್ಲದಿದ್ದರೆ ನ್ಯಾಯಾಲಯವೇ ಅವರಿಗೆ ಹಾದಿ ತೋರುವ ಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.

ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥರು ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಗುರುವಾರ ಆದೇಶ ಪ್ರಕಟಿಸಿದ್ದರು.

Tags:    

Similar News