ರಾಜ್ಯದಲ್ಲಿ ಕಾಟನ್ ಕ್ಯಾಂಡಿ(ಬಾಂಬೆ ಮಿಠಾಯಿ) ಬ್ಯಾನ್!
ಅಪಾಯಕಾರಿ ರಾಸಾಯನಿಕ ಬಳಕೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಟನ್ ಕ್ಯಾಂಡಿ (ಬಾಂಬೆ ಮಿಠಾಯಿ) ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.;
ಬೆಂಗಳೂರು: ರಾಜ್ಯದಲ್ಲಿ ಕಾಟನ್ ಕ್ಯಾಂಡಿ (ಬಾಂಬೆ ಮಿಠಾಯಿ) ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಬಗ್ಗೆ ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟನ್ ಕ್ಯಾಂಡಿಗಳಲ್ಲಿ ರಾಸಾಯನಿಕ ವಸ್ತುಗಳನ್ನು ಮಿಶ್ರಣ ಮಾಡಿರುವ ಬಗ್ಗೆ ಆಹಾರ ಇಲಾಖೆ ನಡೆಸಿದ ಸರ್ವೆಯಲ್ಲಿ ಸಾಬೀತಾಗಿದೆ. ಇದು ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಕಾಟನ್ ಕ್ಯಾಂಡಿಯನ್ನು ನಿಷೇಧಿಸಲಾಗಿದೆ. ಒಂದು ವೇಳೆ ಸರ್ಕಾರದ ನಿಯಮ ಉಲ್ಲಂಘಿಸಿ ಅದರ ಉತ್ಪಾದನೆ ಅಥವಾ ಮಾರಾಟ ನಡೆಸಿದ್ದಲ್ಲಿ 7 ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಆಹಾರಕ್ಕೆ ರಾಸಾಯನಿಕ ಬಣ್ಣ ಬಳಸಿದರೆ 7 ವರ್ಷ ಜೈಲು. ಕಲರ್ ಇಲ್ಲದ ಕಾಟನ್ ಕ್ಯಾಂಡಿ ಮಾರಾಟಕ್ಕೆ ಅವಕಾಶ. ಗೋಬಿ ಮಂಚೂರಿ ಸೇರಿದಂತೆ ಯಾವುದೇ ಆಹಾರವಿರಲಿ. ಆಹಾರದಲ್ಲಿ ಕೃತಕ ಬಣ್ಣ ಬಳಸದಂತೆ ಆದೇಶ ನೀಡಿದ್ದು, ಆಹಾರದಲ್ಲಿ ಕೃತಕ ಬಣ್ಣ ಬಳಸದಂತೆ ಕಠಿಣ ಎಚ್ಚರಿಕೆ ನೀಡಿದ್ದಾರೆ.