COVID-19| ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆ; ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣ

ಬೆಂಗಳೂರಿನಲ್ಲಿಯೇ 73 ಪ್ರಕರಣಗಳು ವರದಿಯಾಗಿದ್ದು, ಉಳಿದ ಪ್ರಕರಣಗಳು ಬೆಂಗಳೂರು ಗ್ರಾಮಾಂತರ (2), ದಕ್ಷಿಣ ಕನ್ನಡ (1), ಮೈಸೂರು (3) ಮತ್ತು ವಿಜಯನಗರ (1) ದಿಂದ ವರದಿಯಾಗಿವೆ. ಇದರಲ್ಲಿ 35 ಹೊಸ ಸೋಂಕುಗಳು ಸೇರಿವೆ.;

Update: 2025-05-27 09:51 GMT

ಕೋವಿಡ್‌

sರಾಜ್ಯದಲ್ಲಿ ಸೋಮವಾರ 37 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಸಕ್ರಿಯ ಸೋಂಕುಗಳ ಸಂಖ್ಯೆ 80ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.

ಈ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿಯೇ 73 ಪ್ರಕರಣಗಳು ವರದಿಯಾಗಿದ್ದು, ಉಳಿದ ಪ್ರಕರಣಗಳು ಬೆಂಗಳೂರು ಗ್ರಾಮಾಂತರ (2), ದಕ್ಷಿಣ ಕನ್ನಡ (1), ಮೈಸೂರು (3) ಮತ್ತು ವಿಜಯನಗರ (1) ದಿಂದ ವರದಿಯಾಗಿವೆ.ಇದರಲ್ಲಿ 35 ಹೊಸ ಸೋಂಕುಗಳು ಸೇರಿವೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಕೋವಿಡ್ -19 ಪಾಸಿಟಿವ್ ದರವು ಶೇಕಡಾ 19.37 ರಷ್ಟಿದೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.

ಕೊರೊನಾ ಪಾಸಿಟಿವ್‌ ಹೆಚ್ಚುತ್ತಿರುವ ಹೊರತಾಗಿರೂ ಯಾರೂ ಭಯ ಪಡುವ ಅಗತ್ಯವಿಲ್ಲ. ಹೆಚ್ಚಿನ ಹೊಸ ಪ್ರಕರಣಗಳು ಸೌಮ್ಯ ಲಕ್ಷಣಗಳನ್ನು ಮಾತ್ರ ಒಳಗೊಂಡಿವೆ. ರೋಗ ಹರಡುವುದನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದರು.

ಸಿದ್ಧರಾಗಿರುವಂತೆ ಅಧಿಕಾರಿಗಳಿಗೆ ಸಿ.ಎಂ ಸೂಚನೆ

ಸೋಮವಾರ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ರೋಗ ಉಲ್ಬಣತೆಯನ್ನು ತಡೆಯಲು ಅಧಿಕಾರಿಗಳು ಸಂಪೂರ್ಣವಾಗಿ ಸಿದ್ದರಾಗಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈಗ ಭಯಪಡುವ ಅಗತ್ಯವಿಲ್ಲ. ಆದರೆ ಪರಿಸ್ಥಿತಿ ಹದಗೆಟ್ಟರೆ ನಾವು ಎಲ್ಲಾ ವ್ಯವಸ್ಥೆಗಳನ್ನು, ವೆಂಟಿಲೇಟರ್‌ಗಳು, ಆಮ್ಲಜನಕ, ಔಷಧಿಗಳನ್ನು ಸಿದ್ಧವಾಗಿಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಎಲ್ಲಾ ಜಿಲ್ಲಾ ಆಸ್ಪತ್ರೆಗಳು ಅಗತ್ಯ ವೈದ್ಯಕೀಯ ಮೂಲಸೌಕರ್ಯ ಮತ್ತು ಸಿಬ್ಬಂದಿಯೊಂದಿಗೆ ಸಿದ್ಧರಾಗಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮನೋಭಾವ ಇರಬಾರದು. ಹಿರಿಯ ನಾಗರಿಕರು, ಗರ್ಭಿಣಿಯರು ಮತ್ತು ಹೃದಯ ಅಥವಾ ಶ್ವಾಸಕೋಶದ ಕಾಯಿಲೆ ಇರುವ ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವಂತೆ ಸಲಹೆ ನೀಡಿದರು. ಗರ್ಣಿಣಿಯರಿಗೆ ಸ್ಥಳೀಯವಾಗಿ ಅಗತ್ಯ ಚಿಕಿತ್ಸೆ ಲಭ್ಯವಿರುವಂತೆ ಖಚಿಪಡಿಸಿಕೊಳ್ಳಲು ಅವರು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದರು. 

Tags:    

Similar News