Covid -19 | ಕೋವಿಡ್ ಸೋಂಕಿಗೆ ರಾಜ್ಯದಲ್ಲಿ ಮೂರನೇ ಬಲಿ ; ಹೆಚ್ಚುತ್ತಿರುವ ಪ್ರಕರಣ, ಕೋವಿಡ್ ಪರೀಕ್ಷೆ ಕಡ್ಡಾಯ

ಮೈಸೂರಿನ 63 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಕಿಡ್ನಿ ವೈಫಲ್ಯವಾಗಿ ಮೇ 15ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ ಮೇ 25ರಂದು ಮೃತಪಟ್ಟಿದ್ದಾರೆ. ಆದರೆ, ಇವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದರಿಂದ ಮೂರನೇ ಸಾವು ಎಂದು ಪರಿಗಣಿಸಲಾಗಿದೆ.;

Update: 2025-05-31 03:37 GMT

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಸದ್ದಿಲ್ಲದೇ ಏರಿಕೆಯಾಗುತ್ತಿದ್ದು,  ಸೋಂಕಿಗೆ ಮೂರನೇ ಬಲಿಯಾಗಿದೆ.

ಮೈಸೂರಿನ 63 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಕಿಡ್ನಿ ವೈಫಲ್ಯವಾಗಿ ಮೇ 15ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ ಮೇ 25ರಂದು ಮೃತಪಟ್ಟಿದ್ದಾರೆ. ಆದರೆ, ಇವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದರಿಂದ ಮೂರನೇ ಸಾವು ಎಂದು ಪರಿಗಣಿಸಲಾಗಿದೆ.

ಕೋವಿಡ್ ಪ್ರಕರಣಗಳ ಏರಿಕೆ ಹಾಗೂ ಮೃತರ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಆತಂಕ ಹೆಚ್ಚಾಗಿದ್ದು, ತೀವ್ರ ಉಸಿರಾಟದ ತೊಂದರೆ (SARI) ಲಕ್ಷಣ ಹೊಂದಿರುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಸ್ವ್ಯಾಬ್​​ ಪಡೆದ ದಿನವೇ ಪ್ರಯೋಗಾಲಯಕ್ಕೆ ಕಳಿಸಬೇಕು ಎಂದು ಸೂಚಿಸಲಾಗಿದೆ.

ಮುಂಗಾರು ಮಳೆ ಹಾಗೂ ಶೀತದ ವಾತಾವರಣ ಇರುವುದರಿಂದ ಸೋಂಕಿನ ಪ್ರಮಾಣ ಹೆಚ್ಚಾಗಲಿದೆ ಎನ್ನಲಾಗಿದೆ.

ಶಾಲೆಗಳಲ್ಲಿ ಮುಂಜಾಗ್ರತಾ ಕ್ರಮ

ಮೇ 29 ರಿಂದ ಶಾಲೆಗಳು ಪುನರಾರಂಭವಾಗಿದ್ದು, ಮಕ್ಕಳಿಗೆ ಸೋಂಕು ಹರಡದಂತೆ ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಗಳು ಮುಂಜಾಗ್ರತಾ ಕ್ರಮ ವಹಿಸಿವೆ.

ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 24 ರ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 114 ಪ್ರಕಾರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 367ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲೂ ಕೋವಿಡ್ ಸೋಂಕಿನ ಭೀತಿ ಹೆಚ್ಚಾಗಿದ್ದು, ಉಸಿರಾಟದ ತೊಂದರೆ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ರಾಜ್ಯ ಅರೋಗ್ಯ ಇಲಾಖೆ ಸೂಚಿಸಿದೆ.

Tags:    

Similar News