Covid | ಕೋವಿಡ್ ಸೋಂಕಿನ ಆತಂಕ ; ಸರ್ಕಾರದಿಂದ ಅಗತ್ಯ ಮುಂಜಾಗ್ರತಾ ಕ್ರಮ

SARI ಪ್ರಕರಣಗಳಲ್ಲಿ ಇಂದಿನಿಂದ( ಭಾನುವಾರ) ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಸದ್ಯಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದ VRDL ಟೆಸ್ಟಿಂಗ್ ಸೌಲಭ್ಯ ಇರುವ ಕೇಂದ್ರಗಳಲ್ಲಿ ಕೋವಿಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ ಎಂದು ಅರೋಗ್ಯ ಇಲಾಖೆ ಹೇಳಿದೆ.;

Update: 2025-05-25 14:42 GMT

ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ರಾಜ್ಯದಲ್ಲಿ ಕೋವಿಡ್ -19 ರೂಪಾಂತರ ತಳಿಯ ಕುರಿತು ಸಾರ್ವಜನಿಕರು ಆತಂಕಪಡಬೇಕಿಲ್ಲ. ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಕೋವಿಡ್ -19 ಸೋಂಕಿನ ತಪಾಸಣೆಗೆ ಅಗತ್ಯ ಟೆಸ್ಟಿಂಗ್ ಕಿಟ್ ಗಳನ್ನು ಸಿದ್ದ ಮಾಡಿಟ್ಟುಕೊಳ್ಳಲಾಗಿದೆ.

SARI ಪ್ರಕರಣಗಳಲ್ಲಿ ಇಂದಿನಿಂದ( ಭಾನುವಾರ) ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಸದ್ಯಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದ VRDL ಟೆಸ್ಟಿಂಗ್ ಸೌಲಭ್ಯ ಇರುವ ಕೇಂದ್ರಗಳಲ್ಲಿ ಕೋವಿಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ ಎಂದು ಅರೋಗ್ಯ ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ‌ ನಿಮ್ಹಾನ್ಸ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು, NIV ಕೇಂದ್ರ ಸೇರಿದಂತೆ ರಾಜ್ಯದ 10 ಕಡೆಗಳಲ್ಲಿ ಟೆಸ್ಟಿಂಗ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಂದು ತಿಂಗಳಿಗಾಗುವಷ್ಟು 5 ಸಾವಿರ RTPCR ಟೆಸ್ಟಿಂಗ್ ಕಿಟ್ ಗಳನ್ನ ತೆಗೆದುಕೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಇಲಾಖೆ ತಿಳಿಸಿದೆ.

ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ, ಸೂಕ್ತ ಆರೋಗ್ಯ ಸೇವೆ ಒದಗಿಸಲು ಸನ್ನದ್ಧವಾಗಿದೆ ಎಂದಿದೆ.

ಬೆಂಗಳೂರಿನಲ್ಲಿ ನಿನ್ನೆ ವೃದ್ಧರೊಬ್ಬರು ಸೋಂಕಿನಿಂದ ಸಾವನ್ನಪ್ಪಿದ ಬೆನ್ನಲ್ಲೇ, ಇದೀಗ ನಗರದಲ್ಲಿ ಮತ್ತೆ ಎರಡು ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಮಲ್ಲೇಶ್ವರಂನಲ್ಲಿ 45 ವರ್ಷದ ವ್ಯಕ್ತಿ ಮತ್ತು ರಾಜಾಜಿನಗರದಲ್ಲಿ 38 ವರ್ಷದ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ.

ಸೋಂಕಿತರಿಗೆ ವಿದೇಶ ಪ್ರಯಾಣದ ಇತಿಹಾಸ ಇಲ್ಲದಿದ್ದರೂ ಸೋಂಕು ದೃಢಪಟ್ಟಿದ್ದು, ಸದ್ಯ ಇಬ್ಬರೂ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಲಭ್ಯವಿರುವ ಟೆಸ್ಟಿಂಗ್ ಕಿಟ್ ಗಳ ಮಾಹಿತಿ

ಆರ್ ಎ ಟಿ (RAT) - 2500

RNA extraction kits -130000

VTM- 200000

RTPCR kits - 5000  


Tags:    

Similar News