Covid-19 |ಕೋವಿಡ್‌ ಪ್ರಕರಣಗಳ ಏರಿಕೆ; ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಸಲಹೆ

ಕೋವಿಡ್‌ ಸೋಂಕಿನ ಬಗ್ಗೆ ಅಧಿಕೃತ ಮೂಲಗಳ ಮೂಲಕ ಮಾತ್ರ ಮಾಹಿತಿ ಪಡೆಯಿರಿ, ವಿದೇಶಗಳಿಂದ ಬರುವ ಪ್ರಯಾಣಿಕರ ಬಗ್ಗೆ ಆರೋಗ್ಯ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆರೋಗ್ಯ ಇಲಾಖೆ ತಿಳಿಸಿದೆ.;

Update: 2025-05-31 13:37 GMT

ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಮನೆ ಮಾಡಿರುವ ಆತಂಕವನ್ನು ತಪ್ಪಿಸಲು ಹಾಗೂ ರೋಗವನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಸಲಹೆಗಳನ್ನು ನೀಡಿದೆ. 

ಕೋವಿಡ್‌ ಸೋಂಕಿನ ಬಗ್ಗೆ ಅಧಿಕೃತ ಮೂಲಗಳ ಮೂಲಕ ಮಾತ್ರ ಮಾಹಿತಿ ಪಡೆಯಿರಿ, ಆರೋಗ್ಯ ಸಿಬ್ಬಂದಿಯೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಿ, ವಿದೇಶಗಳಿಂದ ಬರುವ ಪ್ರಯಾಣಿಕರ ಬಗ್ಗೆ ಆರೋಗ್ಯ ಅಧಿಕಾರಿಗಳಿಗೆ ತಿಳಿಸಿ. ಜನದಟ್ಟಣೆಯ ಸ್ಥಳಗಳಲ್ಲಿ ಮಾಸ್ಕ್‌ ಧರಿಸಿ, ದೈಹಿಕ ಅಂತರವನ್ನು ಕಾಪಾಡಿಕೊಳ್ಳಿ, ಉತ್ತಮ ನೈರ್ಮಲ್ಯವನ್ನು ಅಭ್ಯಾಸ ಮಾಡಿ ಎಂದು ತಿಳಿಸಿದೆ.

ಜ್ವರ, ಕೆಮ್ಮು, ಎದೆನೋವು ಅಥವಾ ಉಸಿರಾಟದ ತೊಂದರೆ ಅನುಭವಿಸಿದರೆ ತಕ್ಷಣ ವೈದ್ಯಕೀಯ ಸಲಹೆ ಪಡೆಯಿರಿ. ಕೋವಿಡ್‌ ಮಾದರಿಗಳ ಪರೀಕ್ಷೆಗೆ ಸಹಕರಿಸಿ.  ಐಎಚ್‌ಐಪಿ ಪೋರ್ಟಲ್‌ನ ಸಮುದಾಯ ಮೇಲ್ವಿಚಾರಣಾ ಮೂಲಕ ಕೋವಿಡ್‌ ತರಹದ ರೋಗಲಕ್ಷಣಗಳ ಹೆಚ್ಚಳವನ್ನು ವರದಿ ಮಾಡಿ.  ಅನಾರೋಗ್ಯ ಪೀಡಿತ ಮಕ್ಕಳನ್ನು ಶಾಲೆಗೆ ಕಳುಹಿಸದೆ ಮನೆಯಲ್ಲಿಯೇ ಇರಿಸಿ. ನೈರ್ಮಲ್ಯವನ್ನು ಕಾಪಾಡುವಂತೆ ಸಲಹೆ ನೀಡಿದೆ.

ಉತ್ತಮ ನೈರ್ಮಲ್ಯ ವಾತಾವರಣಕ್ಕಾಗಿ ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡಬೇಕು, ಸಾರ್ವಜನಿಕ ಪ್ರದೇಶಗಳನ್ನು ಸ್ವಚ್ಚವಾಗಿಡಿ.  ಆರೋಗ್ಯ ಸಲಹೆಗಾಗಿ ಉಚಿತ ಸಹಾಯವಾಣಿ ಸಂಖ್ಯೆ 1800 425 8330 ಗೆ ಕರೆ ಮಾಡಿ ಹಾಗೂ ರೋಗಿಗಳ ತುರ್ತು ಸಂಚಾರಕ್ಕಾಗಿ 108 ಗೆ ಕರೆ ಮಾಡಿ. ಹೆಚ್ಚಿನ ವಿವರಗಳಿಗಾಗಿ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗೆ https://hfwcom.karnataka.gov.in IL.B. ಭೇಟಿ ನೀಡಬಹುದು ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 

Tags:    

Similar News