ಅಸ್ವಸ್ಥ ಅಮೆರಿಕದ ಮಹಿಳೆಗೆ ವಿಮಾನದಲ್ಲೇ ಸಿಪಿಆರ್; ಡಾ. ಅಂಜಲಿ ನಿಂಬಾಳ್ಕರ್ ಮಾನವೀಯ ಕ್ರಮಕ್ಕೆ ಶ್ಲಾಘನೆ
ಡಾ.ಅಂಜಲಿ ನಿಂಬಾಳ್ಕರ್ ಅವರು ತುರ್ತು ವೈದ್ಯಕೀಯ ನೆರವು ಒದಗಿಸುವ ಮೂಲಕ ಮಹಿಳೆಯೊಬ್ಬರ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ʼಎಕ್ಸ್ʼ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಅಂಜಲಿ ನಿಂಬಾಳ್ಕರ್ ಅವರು ವಿಮಾನದಲ್ಲಿ ಸಹ ಪ್ರಯಾಣಿಕ ಮಹಿಳೆಗೆ ತುರ್ತು ಚಿಕಿತ್ಸೆ ನೀಡಿದರು.
ವಿಮಾನ ಪ್ರಯಾಣದ ವೇಳೆ ಮಧ್ಯ ಆಗಸದಲ್ಲಿ ಅಸ್ವಸ್ಥಗೊಂಡಿದ್ದ ಅಮೆರಿಕದ ಮಹಿಳೆಗೆ ತುರ್ತು ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರ ಸಮಯೋಚಿತ ಹಾಗೂ ಮಾನವೀಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಡಾ.ಅಂಜಲಿ ನಿಂಬಾಳ್ಕರ್ ಅವರು ತುರ್ತು ವೈದ್ಯಕೀಯ ನೆರವು ಒದಗಿಸುವ ಮೂಲಕ ಮಹಿಳೆಯೊಬ್ಬರ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ʼಎಕ್ಸ್ʼ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ವೈದ್ಯ ವೃತ್ತಿಯಿಂದ ಹೊರಬಂದು ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದರೂ, ಅಗತ್ಯದ ಸಂದರ್ಭದಲ್ಲಿ ರೋಗಿಯ ನೆರವಿಗೆ ಧಾವಿಸಿದ ಡಾ. ಅಂಜಲಿ ಅವರ ಸೇವಾಭಾವ ಮತ್ತು ಸಮಯಪ್ರಜ್ಞೆ ಅತ್ಯಂತ ಶ್ಲಾಘನೀಯ. ಅಧಿಕಾರ ಇದ್ದರೂ ಇಲ್ಲದಿದ್ದರೂ ಜನಸೇವೆ ಎಂಬ ಧ್ಯೇಯದೊಂದಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸಹಾಯಕ್ಕೆ ನಿಲ್ಲುವ ಅಂಜಲಿಯಂತಹವರು ಸಮಾಜಕ್ಕೆ ಮಾದರಿ ಎಂದು ಪ್ರಶಂಸಿಸಿದ್ದಾರೆ.
ನಡೆದಿದ್ದೇನು?
ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ‘ವೋಟ್ ಚೋರಿ’ ಪ್ರತಿಭಟನೆಯಲ್ಲಿ ಭಾಗಿಯಾಗಲು ಡಾ. ಅಂಜಲಿ ನಿಂಬಾಳ್ಕರ್ ಅವರು ಗೋವಾ–ನವದೆಹಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅಮೆರಿಕದ ಮಹಿಳೆಯೊಬ್ಬರು ದಿಢೀರ್ ಅಸ್ವಸ್ಥಗೊಂಡಿದ್ದರು. ಡಾ.ಅಂಜಲಿ ನಿಂಬಾಳ್ಕರ್ ಅವರು ತಕ್ಷಣವೇ ಸಿಪಿಆರ್ ಮಾಡಿ, ಪ್ರಾಣ ಉಳಿಸಿದ್ದಾರೆ.
ನಿಂಬಾಳ್ಕರ್ ಅವರು ಆ ರೋಗಿಯ ಪಕ್ಕದಲ್ಲೇ ಇದ್ದು, ಆಕೆಯ ವೈದ್ಯಕೀಯ ಅಗತ್ಯಗಳಿಗೆ ನಿರಂತರ ಗಮನ ಹರಿಸಿ ಧೈರ್ಯ ತುಂಬಿದ್ದಾರೆ. ವಿಮಾನವು ದೆಹಲಿಯಲ್ಲಿ ಲ್ಯಾಂಡ್ ಆದ ತಕ್ಷಣವೇ ಅಸ್ವಸ್ಥ ಅಮೆರಿಕದ ಮಹಿಳೆಯನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಂಬಾಳ್ಕರ್ ಅವರ ಸಮಯೋಚಿತ ಕ್ರಮಕ್ಕೆ ಸಹ ಪ್ರಯಾಣಿಕರು ಮತ್ತು ವಿಮಾನ ಸಿಬ್ಬಂದಿ ಭಾರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.