ವಾಯುಭಾರ ಕುಸಿತ| ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಮಳೆ ಸಾಧ್ಯತೆ
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆ ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆಯ ಸಾಧ್ಯತೆ ಇದ್ದು, ಉತ್ತರ ಒಳನಾಡು ಮಾತ್ರ ಸಂಪೂರ್ಣವಾಗಿ ಒಣ ಹವೆಯಿಂದ ಕೂಡಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ.
ನೈರುತ್ಯ ಬಂಗಾಳಕೊಲ್ಲಿಯಲ್ಲಿ 'ದಿತ್ವಾ' ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ ಇದ್ದು, ಉತ್ತರ ಒಳನಾಡು ಸಂಪೂರ್ಣ ಒಣ ಹವೆಯಿಂದ ಕೂಡಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗುತ್ತಿದೆ. ಈ ವಾರ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ17°C ವರೆಗೆ ಇಳಿಯುವ ಸಾಧ್ಯತೆ ಇದೆ. ನಗರದಲ್ಲಿ ದಟ್ಟವಾದ ಮಂಜು ಮತ್ತು ಇಬ್ಬನಿ ಮುಸುಕಿದ ವಾತಾವರಣದ ಜೊತೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 26°C ಮತ್ತು ಕನಿಷ್ಠ ತಾಪಮಾನ 18°C ಇರುವ ಸಾಧ್ಯತೆಯಿದೆ.
ಬಂಗಾಳಕೊಲ್ಲಿಯ ನೈರುತ್ಯ ಮತ್ತು ಬಂಗಾಳಕೊಲ್ಲಿಯ ಪಶ್ಚಿಮ-ಮಧ್ಯ, ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಪಕ್ಕದ ಪ್ರದೇಶಗಳಲ್ಲಿನ ದಿತ್ವಾ ಚಂಡಮಾರುತದ ವಾಯುಭಾರ ಕುಸಿತವು ಗಂಟೆಗೆ 3 ಕಿ.ಮೀ ವೇಗದಲ್ಲಿ ನಿಧಾನವಾಗಿ ದಕ್ಷಿಣ-ನೈರುತ್ಯ ದಿಕ್ಕಿಗೆ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.