Coastal Tension | ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಅಲ್ಲಲ್ಲಿ ಚೂರಿ ಇರಿತ, ಕಲ್ಲು ತೂರಾಟ, ಸಮಗ್ರ ತನಿಖೆಗೆ ಮುಖ್ಯಮಂತ್ರಿ ಸೂಚನೆ
By : The Federal
Update: 2025-05-02 04:04 GMT
2025-05-02 05:07 GMT
ಶಾಂತಿ ಕದಡುವ ಕೆಲಸ ಮಾಡಬೇಡಿ: ದುಷ್ಕರ್ಮಿಗಳ ವಿರುದ್ಧ ಕ್ರಮ; ದಿನೇಶ್ ಗುಂಡೂರಾವ್
ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು ಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ ಕ್ರಿಮಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಇಲ್ಲಿ ಯಾರ ಓಲೈಕೆಯೂ ಇಲ್ಲ. ಯಾರ ತುಷ್ಟೀಕರಣವೂ ಇಲ್ಲ. ಈಗಾಗಲೇ ಈ ಕೃತ್ಯದ ಕುರಿತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಹತ್ಯೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದೇನೆ.
2025-05-02 04:59 GMT
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಕ್ರಮಕ್ಕೆ ಸ್ಪೀಕರ್ ಖಾದರ್ ಸೂಚನೆ
ಸುಹಾಸ್ ಶೆಟ್ಟಿ ಎಂಬುವರ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸ್ಪೀಕರ್ ಯು.ಟಿ ಖಾದರ್ ಸೂಚನೆ ನೀಡಿದ್ದಾರೆ.
2025-05-02 04:56 GMT
ಬಿಎಸ್ ವಿಜಯೇಂದ್ರ ವಾಗ್ದಾಳಿ
ಹಿಂದೂಪರ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿರೋಧಪಕ್ಷದ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
2025-05-02 04:53 GMT
ನಿಷೇಧಾಜ್ಞೆ ನಡುವೆ ಸುಹಾಸ್ ಮೃತದೇಹದ ಮೆರವಣಿಗೆಗೆ ಸಿದ್ಧತೆ
ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರ ಹೊರತಾಗಿಯೂ ಮೃತದೇಹವನ್ನು ಅವರ ಊರಾದ ಕಾರಿಂಜಕ್ಕೆ ಮೆರವಣಿಗೆಯಲ್ಲಿ ಒಯ್ಯಲು ಹಿಂದುತ್ವವಾದಿ ಸಂಘಟನೆಗಳ ಮುಖಂಡರು ಸಿದ್ಧತೆ ನಡೆಸಿದ್ದಾರೆ. ಇದಕ್ಕಾಗಿ ವಾಹನವನ್ನು ಹೂವುಗಳಿಂದ ಅಲಂಕರಿಸಿ ಸಜ್ಜುಗೊಳಿಸಲಾಗಿದೆ. ಆಸ್ಪತ್ರೆಗೆ ಶಾಸಕರಾದ ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ ಹಾಗೂ ರಾಜೇಶ್ ನಾಯ್ಕ್ ಉಳೇಪಾಡಿ, ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ನೀಡಿದ್ದಾರೆ.
2025-05-02 04:41 GMT
ಮಂಗಳೂರಿನಲ್ಲಿ ಮೂರು ದಿನ ಮದ್ಯದಂಗಡಿ ಬಂದ್
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರಿನ ಕಮಿಷನರೇಟ್ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳು ಮೂರು ದಿನ ಬಂದ್ ಗೆ ಆದೇಶ ಹೊರಡಿಸಲಾಗದೆ. ಸುಹಾಸ್ ಶೆಟ್ಟಿ ಕೊಲೆ ಹಿನ್ನಲೆ ಮಂಗಳೂರು ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ 4 ನೇತಾರೀಖನವರಿಗೆ ಮದ್ಯದ ಅಂಗಡಿ ಬಂದ್. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.