ರೌಡಿಶೀಟರ್ ಮತ್ತು ಹಿಂದೂಪರ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗದಳ ಸಂಘಟನೆಗಳು ಕರೆ ನೀಡಿದ್ದ ದಕ್ಷಿಣ ಕನ್ನಡ ಬಂದ್ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಈ ಬಂದ್ನಿಂದಾಗಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಅದೇ ರೀತಿ ಅಂಗಡಿಗಳು ಬಹುತೇಕ ಮುಚ್ಚಿದೆ. ಆದರೆ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಈ ಅನಿರೀಕ್ಷಿತ ಪರಿಸ್ಥಿತಿಯಿಂದ ತೀವ್ರ ತೊಂದರೆ ಎದುರಿಸಿದ್ದಾರೆ. ಬಸ್ಗಳ ಮೇಲೆ ಕಲ್ಲು ತೂರಾಟ ಬೆಂಗಳೂರಿನಿಂದ ರಾತ್ರಿ ಹೊರಡು ಮಂಗಳೂರಿಗೆ ಬಂದ ನಾಲ್ಕು ಬಸ್ಗಳ ಮೇಲೆ ಕಿಡಿಗೇಡಿಗಳು ನಸುಕಿನಲ್ಲಿ ಕಲ್ಲು ಎಸೆದ ಘಟನೆ ನಡೆದಿದೆ. ಪಂಪ್ವೆಲ್ ಬಳಿ ನಡೆದ ಈ ದಾಳಿಯಲ್ಲಿ ಬಸ್ಗಳ ಗಾಜುಗಳು ಒಡೆದುಹೋಗಿವೆಯಾದರೂ, ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಈ ಘಟನೆಯ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತನ್ನ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ. "ಪಂಪ್ವೆಲ್ ಬಳಿ ನಾಲ್ಕು ಬಸ್ಗಳ ಮೇಲೆ ಕಲ್ಲು ಎಸೆದು ಗಾಜುಗಳು ಒಡೆದಿವೆ. ಪ್ರಯಾಣಿಕರ ಸುರಕ್ಷತೆಗಾಗಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ," ಎಂದು ಕೆಎಸ್ಆರ್ಟಿಸಿ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಕ ರಾಜೇಶ್ ಶೆಟ್ಟಿ ತಿಳಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ. ಅದೇ ರೀತಿ ಹಂಪನಕಟ್ಟೆಯ ಬಳಿ ಖಾಸಗಿ ಬಸ್ ಒಂದರ ಮೇಲೂ ಕಲ್ಲು ತೂರಾಟ ನಡೆದಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಸ್ಯೆ ಶುಕ್ರವಾರ ನಿಗದಿಯಾಗಿದ್ದ ಪಿ.ಯು. ಗಣಿತ ಪರೀಕ್ಷೆ-2ಕ್ಕೆ ಹಾಜರಾಗಲು ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆ ಎದುರಾಗಿದೆ. ಅದೇ ರೀತಿ ರಾಜೀವ ಗಾಂಧಿ ಆರೋಗ್ಯ ಬಿ ಫಾರ್ಮಾ ಸೆಮಿಸ್ಟರ್ ಪರೀಕ್ಷೆ ಶುಕ್ರವಾರ ನಿಗದಿಯಾಗಿದ್ದು ಅವರಿಗೂ ತೊಂದರೆಯಾಗಿದೆ. ಬಸ್ ಸಂಚಾರ ಸ್ಥಗಿತಗೊಂಡಿರುವುದರಿಂದ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಸಾಧ್ಯವಾಗದೇ ಅನೇಕ ವಿದ್ಯಾರ್ಥಿಗಳು ಪರದಾಡಿದರು. ಬಂದ್ನಿಂದಾಗಿ ಸಾರ್ವಜನಿಕ ಸಾರಿಗೆ ಸಂಪೂರ್ಣವಾಗಿ ಬಂದ್ ಆಗಿದ್ದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ತೀವ್ರ ತೊಂದರೆ ಅನುಭವಿಸಿದ್ದಾರೆ. ನಗರದಲ್ಲಿ ಜನಸಂಚಾರ ವಿರಳ ಮಂಗಳೂರಿನಲ್ಲಿ ಬಹುತೇಕ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳು ಮುಚ್ಚಿರುವುದರಿಂದ ಜನಸಂಚಾರ ವಿರಳವಾಗಿದೆ. ರಸ್ತೆಗಳಲ್ಲಿ ಜನರ ಸಂಚಾರವಿಲ್ಲದೇ ಬಿಕೋ ಎಂಬಂತೆ ಕಾಣುತ್ತಿದೆ. ಬಂದ್ಗೆ ಬೆಂಬಲ ವ್ಯಕ್ತಪಡಿಸಿ ನಗರದ ಪ್ರಮುಖ ಮಾರುಕಟ್ಟೆ ಪ್ರದೇಶಗಳು ಸಂಪೂರ್ಣ ಸ್ಥಬ್ದವಾಗಿವೆ. ಪೊಲೀಸರು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರಿಕೆ ವಹಿಸಿದ್ದಾರೆ. ಸುಹಾಸ್ ಶೆಟ್ಟಿಯ ಹತ್ಯೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವಿಎಚ್ಪಿ ಮತ್ತು ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ನಗರದಾದ್ಯಂತ ಹೆಚ್ಚಿನ ಪೊಲೀಸ್ ಬಂದೂಬಸ್ತ್ ಜಾರಿಗೊಳಿಸಿದ್ದಾರೆ. ಮೇ 5ರ ವರೆಗೆ ಸೆಕ್ಷನ್ 144 ಜಾರಿಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರು ಕಮಿಷನರೇಟ್ ವ್ಯಾಪ್ತಿಗೆ ಸೀಮಿತವಾಗಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಸ್ತರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಇದೇ 5ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ಎಂ.ಪಿ. ಅವರು ಆದೇಶ ಹೊರಡಿಸಿದ್ದಾರೆ.