Actor Darshan Case | ದರ್ಶನ್‌ಗೆ ಮತ್ತೆ ನಿರಾಸೆ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಅವರ ಸಹಚರರ ಜಾಮೀನು ಅರ್ಜಿ ವಿಚಾರಣೆಯನ್ನು ಡಿ.9 (ಸೋಮವಾರ)ರ ಮಧ್ಯಾಹ್ನ 2.30ಕ್ಕೆ ಹೈಕೋರ್ಟ್‌ ಮುಂದೂಡಿದೆ.

Update: 2024-12-06 12:00 GMT
ನಟ ದರ್ಶನ್‌
Click the Play button to listen to article

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರ ಜಾಮೀನು ಅರ್ಜಿ ವಿಚಾರಣೆಯನ್ನು ಡಿ.9 (ಸೋಮವಾರ) ಮಧ್ಯಾಹ್ನ 2.30ಕ್ಕೆ ಹೈಕೋರ್ಟ್‌ ಮುಂದೂಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾಗೌಡ, ಆರ್‌ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್‌ ಅಲಿಯಾಸ್‌ ಅನು, ಜಗದೀಶ್‌ ಅಲಿಯಾಸ್‌ ಜಗ್ಗ, ಪ್ರದೋಷ್‌ ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ಶುಕ್ರವಾರ ನಡೆಸಿತು.

ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ವಾದ ಮಂಡಿಸಿದರು. ಬಳಿಕ ಪ್ರತಿವಾದ ನಡೆಸಿದ ಎಸ್​ಪಿಪಿ ಪ್ರಸನ್ನ ಕುಮಾರ್ ಅವರು ಮೊದಲಿಗೆ ಪವಿತ್ರಾ ಗೌಡ ಅವರ ವಕೀಲರು ಮಂಡಿಸಿದ ವಾದಗಳಿಗೆ ಪ್ರತಿವಾದ ಮಂಡಿಸಿದರು. ಪವಿತ್ರಾ ಗೌಡ ಅವರದ್ದು, ಅಪಹರಣದಲ್ಲಾಗಲಿ, ಕೊಲೆಯಲ್ಲಾಗಲಿ ಪಾತ್ರವಿಲ್ಲವೆಂದು ಪವಿತ್ರಾ ಪರ ವಕೀಲ ಸೆಬಾಸ್ಟಿಯನ್ ವಾದಿಸಿದ್ದರು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಸನ್ನ ಕುಮಾರ್ ಅವರು, ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದಾಗ ಅದು ಇಷ್ಟವಾಗದೇ ಇದ್ದರೆ ಆತನನ್ನು ಕೂಡಲೇ ಬ್ಲಾಕ್ ಮಾಡಬಹುದಿತ್ತು, ಅಲ್ಲದೆ ರೇಣುಕಾ ಸ್ವಾಮಿ ಏಪ್ರಿಲ್ ತಿಂಗಳಿನಿಂದಲೂ ಮೆಸೇಜ್ ಮಾಡುತ್ತಿದ್ದಾನೆ. ಆಗಿನಿಂದಲೂ ಏಕೆ ಬ್ಲಾಕ್ ಮಾಡಲಿಲ್ಲ. ಬದಲಿಗೆ ನಿನ್ನ ನಂಬರ್ ಎಂದು ಪವಿತ್ರಾ ಮೆಸೇಜ್ ಮಾಡಿದ್ದಾರೆ. ಆ ನಂತರ ನಂಬರ್ ಅನ್ನು ಎ3 ಪವನ್​ಗೆ ನೀಡಿ ಸಂಭಾಷಣೆ ನಡೆಸುವಂತೆ ಹೇಳಿದ್ದಾರೆ ಎಂದು ಹೇಳುವ ಮೂಲಕ, ರೇಣುಕಾ ಸ್ವಾಮಿ ಅಪಹರಣದಲ್ಲಿ ಪವಿತ್ರಾ ಕೈವಾಡ ಇದೆ ಎಂದು ವಾದಿಸಿದರು.

ದರ್ಶನ್ ಅನಾರೋಗ್ಯದ ವಿಷಯವಾಗಿ ಅವರ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡ ಪ್ರಸನ್ನ ಕುಮಾರ್, ದರ್ಶನ್ ಪರ ವಕೀಲರು, ನ್ಯಾಯಾಲಯಕ್ಕೆ ಸುಳ್ಳು ಹೇಳಿದ್ದಾರೆ. ನ್ಯಾಯಾಲಯದ ದಾರಿ ತಪ್ಪಿಸುವ ಕಾರ್ಯ ಮಾಡಿದ್ದಾರೆ ಎಂದು ವಾದ ಮಂಡಿಸಿದರು.

ಅಂತಿಮವಾಗಿ ನ್ಯಾಯಮೂರ್ತಿಗಳು ಪ್ರಕರಣದ ಮುಂದಿನ ವಿಚಾರಣೆಯನ್ನು ಸೋಮವಾರ (ಡಿ.9) ಮಧ್ಯಾಹ್ನ 2:30ಕ್ಕೆ ಮುಂದೂಡಿದರು.

Tags:    

Similar News