Actor Darshan Case | ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.10ಕ್ಕೆ ಮುಂದೂಡಿಕೆ

ರೇಣುಕಾ ಸ್ವಾಮಿಯನ್ನು ಹೇಗೆ ಆರೋಪಿಗಳು ಟ್ರ್ಯಾಪ್ ಮಾಡಿದರು. ಹೇಗೆ ಆತನನ್ನು ಅಪಹರಣ ಮಾಡಿದರು, ಪಟ್ಟಣಗೆರೆ ಶೆಡ್​ನಲ್ಲಿ ದರ್ಶನ್ ಮತ್ತು ಗ್ಯಾಂಗ್​ ಹೇಗೆ ರೇಣುಕಾ ಸ್ವಾಮಿ ಮೇಲೆ ಕ್ರೌರ್ಯ ಮೆರೆದರು ಎಂದು ಎಸ್‌ಎಸ್‌ಪಿ ನ್ಯಾಯಾಲಯದ ಮುಂದೆ ಬಿಚ್ಚಿಟ್ಟಿದ್ದರು.

Update: 2024-10-09 12:37 GMT
ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಬುಧವಾರ ನಡೆದಿದ್ದು, ದರ್ಶನ್​ ಜಾಮೀನು ಅರ್ಜಿ ವಿಚಾರಣೆಯನ್ನು ಗುರುವಾರ (ಅ.10) ಕ್ಕೆ ಮುಂದೂಡಲಾಗಿದೆ.

ಪವಿತ್ರಾ ಗೌಡ ಜಾಮೀನು ಅರ್ಜಿಯೂ ಸೇರಿದಂತೆ ಇತರೆ ಐದು ಆರೋಪಿಗಳ ಜಾಮೀನು ಅರ್ಜಿಯ ಆದೇಶವನ್ನು ಅ.14 ರಂದು ಪ್ರಕಟಿಸುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ.

ದರ್ಶನ್ ಪರ ವಕೀಲರಾದ ಸಿ ವಿ ನಾಗೇಶ್ ದರ್ಶನ್‌ ಪರ ವಾದ ಮಂಡಿಸಿ, ಪೊಲೀಸರೇ ಸಾಕ್ಷ್ಯಗಳನ್ನು ಸೃಷ್ಟಿ ಮಾಡಿದ್ದಾರೆ ಎಂದು ವಾದಿಸಿದ್ದರು. ಪ್ರಕರಣದ ತನಿಖೆಯಲ್ಲಿ ಸತತವಾಗಿ ತಪ್ಪುಗಳನ್ನು ಮಾಡಿದ್ದಾರೆ ಎಂದು ಆರೋಪ ಪಟ್ಟಿಯನ್ನು ಅರೇಬಿಯನ್ ನೈಟ್ಸ್ ಕತೆಗೆ ಹೋಲಿಸಿದ್ದರು. ಪೊಲೀಸರ ತನಿಖೆಯನ್ನು ಬೀದಿ ಬದಿಯಲ್ಲಿ ಮ್ಯಾಜಿಕ್ ಗೆ ಹೋಲಿಸಿದ್ದರು.

ಈ ವಾದಕ್ಕೆ ಪ್ರತಿವಾದ ಮಂಡಿಸಿದ ಎಸ್​ಪಿಪಿ ಪ್ರಸನ್ನ ಕುಮಾರ್, ನಾಗೇಶ್​ ಅವರು ಎತ್ತಿದ್ದ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದ್ದರು. ರೇಣುಕಾ ಸ್ವಾಮಿಯನ್ನು ಹೇಗೆ ಆರೋಪಿಗಳು ಟ್ರ್ಯಾಪ್ ಮಾಡಿದರು. ಹೇಗೆ ಆತನನ್ನು ಅಪಹರಣ ಮಾಡಿದರು, ಪಟ್ಟಣಗೆರೆ ಶೆಡ್​ನಲ್ಲಿ ದರ್ಶನ್ ಮತ್ತು ಗ್ಯಾಂಗ್​ ಹೇಗೆ ರೇಣುಕಾ ಸ್ವಾಮಿ ಮೇಲೆ ಕ್ರೌರ್ಯ ಮೆರೆದರು ಎಂದು ನ್ಯಾಯಾಲಯದ ಮುಂದೆ ಬಿಚ್ಚಿಟ್ಟಿದ್ದರು.

ಎಸ್​ಪಿಪಿ ಪ್ರಸನ್ನ ಕುಮಾರ್ ವಾದಕ್ಕೆ ಪ್ರತಿವಾದ ಸಲ್ಲಿಸಲು ಸಿವಿ ನಾಗೇಶ್ ಅವರಿಗೆ ಅವಕಾಶ ನೀಡಲಾಯ್ತು. ಆದರೆ ತಾವು ಗುರುವಾರ (ಅ.10) ರಂದು ವಾದ ಮಂಡಿಸುವುದಾಗಿ ಅವರು ಹೇಳಿದರು. ಹಾಗಾಗಿ, ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಯ್ತು. ಇನ್ನು ಎ1 ಪವಿತ್ರಾ, ಎ8, ಎ11, ಎ12 ಹಾಗೂ ಎ13 ಅವರುಗಳ ಜಾಮೀನು ಅರ್ಜಿಯ ಕುರಿತಾದ ಆದೇಶವನ್ನು ಅ.14 ರಂದು ಪ್ರಕಟಿಸುವುದಾಗಿ ನ್ಯಾಯಾಧೀಶರು ಹೇಳಿದರು.

Tags:    

Similar News