Actor Darshan Case | ರೇಣುಕಾಸ್ವಾಮಿ ಶವದ ಮುಂದೆ ದರ್ಶನ್‌; ಪೊಲೀಸರಿಗೆ ಸಿಕ್ಕಿದೆ ಮಹತ್ವದ ದಾಖಲೆ

ರೇಣುಕಾ ಸ್ವಾಮಿ ಶವದ ಮುಂದೆ ದರ್ಶನ್ ಹಾಗೂ ಇತರೆ ಆರೋಪಿಗಳು ನಿಂತಿರುವ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದೆ. ಪ್ರಕರಣದ ಆರೋಪಿಯೊಬ್ಬರ ಮೊಬೈಲ್​ನಿಂದ ಈ ಫೋಟೊಗಳನ್ನುರಿಟ್ರೀವ್ ಮಾಡಲಾಗಿದೆ.

Update: 2024-11-22 09:55 GMT
ದರ್ಶನ್‌ ಜಾಮೀನು ಅರ್ಜಿ ಮತ್ತೆ ಮುಂದೂಡಿಕೆಯಾಗಿದೆ.

ರೇಣುಕಾ ಸ್ವಾಮಿ ಶವದ ಮುಂದೆ ದರ್ಶನ್ ನಿಂತಿರುವ ಚಿತ್ರವೊಂದು ಪೊಲೀಸರಿಗೆ ಲಭ್ಯವಾಗಿದ್ದು, ಈ ಪ್ರಕರಣದ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ ಹಾಗೂ ದರ್ಶನ್‌ ಮತ್ತಿತರ ಆರೋಪಿಗಳಿಗೆ ಕಂಟಕವಾಗಲಿದೆ.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿನ  ಪಟ್ಟಣಗೆರೆ ಶೆಡ್​ಗೆ ತಂದು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ರೇಣುಕಾಸ್ವಾಮಿ ಮೃತಪಟ್ಟಾಗ ದರ್ಶನ್‌ ಆ ಸ್ಥಳದಲ್ಲಿ ಇರಲಿಲ್ಲ ಅವರು ಹೊಡೆದು ಹೊರಟುಹೋಗಿದ್ದರು ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ರೇಣುಕಾಸ್ವಾಮಿ ಶವದ ಮುಂದೆ ದರ್ಶನ್ ಹಾಗೂ ಇತರೆ ಆರೋಪಿಗಳು ನಿಂತಿರುವ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದೆ.  ಪ್ರಕರಣದ ಆರೋಪಿಯೊಬ್ಬನ ಮೊಬೈಲ್​ನಿಂದ ಈ ಫೋಟೊಗಳನ್ನು ತಂತ್ರಜ್ಞಾನ ಬಳಸಿ ಮರುಸಂಪಾದನೆ (ರಿಟ್ರೀವ್‌) ಮಾಡಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ದೊರೆತ ಸಾಕ್ಷ್ಯಗಳನ್ನು ಪರೀಕ್ಷೆಗಾಗಿ ಹೈದರಾಬಾದ್ ಹಾಗೂ ಬೆಂಗಳೂರಿನ ಎಫ್​ಎಸ್​ಎಲ್ ಕೇಂದ್ರಗಳಿಗೆ ಕಳಿಸಿದ್ದರು. ಹೈದರಾಬಾದ್​ನಿಂದ ಕೆಲವು ವರದಿಗಳು ಬರುವುದು ಬಾಕಿ ಇದ್ದವು. ಅವು ಈಗ ಬಂದಿದ್ದು, ಆರೋಪಿ ಪವನ್​ ಅವರ ಮೊಬೈಲ್​ನಿಂದ 2 ಫೋಟೋಗಳನ್ನು ರಿಕವರಿ ಮಾಡಲಾಗಿದೆ. ರೇಣುಕಾ ಸ್ವಾಮಿ ಶವನದ ಮುಂದೆ ದರ್ಶನ್ ಹಾಗೂ ಇತರೆ ಆರೋಪಿಗಳು ನಿಂತಿರುವ ಚಿತ್ರವನ್ನು ಪವನ್ ತೆಗೆದಿದ್ದರು ಎನ್ನಲಾಗಿದೆ.  ಆ ನಂತರ ಅವನ್ನು ಡಿಲೀಟ್ ಮಾಡಿದ್ದರು. ಆದರೆ ಎಫ್​ಎಸ್​ಎಲ್​ ಕೇಂದ್ರದವರು ತಂತ್ರಜ್ಞಾನ ಬಳಸಿ ಆ ಫೋಟೊಗಳನ್ನು ರಿಟ್ರೀವ್ ಮಾಡಿದ್ದಾರೆ. ಚಿತ್ರದಲ್ಲಿ ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್, ನೀಲಿ ಬಣ್ಣದ ಟೀ ಶರ್ಟ್ ಧರಿಸಿ ದರ್ಶನ್ ನಿಂತಿರುವ ಚಿತ್ರವಿದೆ. ಚಿತ್ರದಲ್ಲಿ ಪ್ರಕರಣ ಇತರೆ ಕೆಲವು ಆರೋಪಿಗಳು ಸಹ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ದರ್ಶನ್ ವಿರುದ್ಧ ಮತ್ತೊಂದು ಪ್ರಬಲ ಸಾಕ್ಷಿಯಾಗಲಿದೆ. 

ಜಾಮೀನು ಅರ್ಜಿ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿ ನಂ-1 ಪವಿತ್ರಾ ಗೌಡ, 2ನೇ ಆರೋಪಿ ದರ್ಶನ್, 6ನೇ ಆರೋಪಿ ಜಗದೀಶ್, 7ನೇ ಆರೋಪಿ ಅನುಕುಮಾರ್ ಅಲಿಯಾಸ್ ಅನು, 11ನೇ ಆರೋಪಿ ನಾಗರಾಜ್ ಮತ್ತು 12ನೇ ಆರೋಪಿ ಎಂ.ಲಕ್ಷ್ಮಣ್ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸಿ  ವಿಚಾರಣೆಯನ್ನು ಮುಂದೂಡಿದ್ದಾರೆ. ಹೆಚ್ಚುವರಿ ಆರೋಪಪಟ್ಟಿ ವಿಚಾರಣಾ ಕೋರ್ಟ್​ಗೆ ಸಲ್ಲಿಸಲಾಯಿತು. ಅರ್ಹತೆ ಮೇಲೆ ಮುಂದಿನ ದಿನಾಂಕದಂದು ವಿಚಾರಣೆ ನಡೆಸಬಹುದು ಎಂದು ನ್ಯಾಯಮೂರ್ತಿಗಳು ಸೂಚಿಸಿದರು.

ದರ್ಶನ್‌ ಚಿಕಿತ್ಸೆ ಬಗ್ಗೆ ಮಾಹಿತಿಯೇ ಇಲ್ಲ

ವಿಚಾರಣೆ ವೇಳೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್, ಅನಾರೋಗ್ಯ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ದರ್ಶನ್‌  ಹೊರಬಂದಿದ್ದಾರೆ. ಆದರೆ ಈವರೆಗೆ ದರ್ಶನ್‌ ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು  ಮಾಹಿತಿ ನೀಡಿಲ್ಲ. ಕೋರ್ಟ್ ಜಾಮೀನು ನೀಡುವಾಗ ಯಾವಾಗ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕು, ಎಷ್ಟು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ. ತದನಂತರದಲ್ಲಿ ಏನಾದರೂ ಚಿಕಿತ್ಸೆ ಮುಂದುವರಿಯುತ್ತದೆಯೋ ಹೇಗೆ ಎಂಬ ವಿವರಗಳನ್ನು ಬಿಡುಗಡೆಯಾದ ಒಂದು ವಾರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂಬ ಷರತ್ತು ವಿಧಿಸಿತ್ತು. ಆದರೆ, ಈ ಷರತ್ತಿಗೆ ಅನುಗುಣವಾಗಿ ಅವರು ಈತನಕ ಪ್ರಾಸಿಕ್ಯೂಷನ್‌ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಬದಲಾಗಿ ಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ನೀಡಿದೆ' ಎಂದು ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್ ಅಸಮಧಾನ ವ್ಯಕ್ತಪಡಿಸಿದ್ದಾರೆ. 

Tags:    

Similar News