ದಾವಣಗೆರೆ ಬಿಜೆಪಿಯಲ್ಲಿ ಎದ್ದಿದ್ದ ಬಂಡಾಯ ಶಮನಗೊಳಿಸುವಲ್ಲಿ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.
ಸಿದ್ದೇಶ್ವರ್- ರೇಣುಕಾಚಾರ್ಯ ಬಣದ ನಡುವೆ ಸಂಧಾನ ಆಗಿದ್ದು, ಮಾಜಿ ಸಚಿವ ರವೀಂದ್ರನಾಥ್ ನೇತೃತ್ವದಲ್ಲಿ ದಾವಣಗೆರೆ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.
ಸಭೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಅವರು, ʼʼದಾವಣಗೆರೆ ಯಾವುದೇ ಕಾರಣಕ್ಕೂ ಅಭ್ಯರ್ಥಿ ಬದಲಾವಣೆ ಇಲ್ಲ. ಮಾಜಿ ಸಚಿವ ರವೀಂದ್ರನಾಥ್ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆʼʼ ಎಂದು ಹೇಳಿದರು.
ದಾವಣಗೆರೆಯಲ್ಲಿ ಅತೀ ಹೆಚ್ಚು ಮತಗಳಿಂದ ನಮ್ಮ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಗೆಲ್ಲುತ್ತಾರೆ. ಯಾವುದೇ ಬಂಡಾಯವಿಲ್ಲ ಎಲ್ಲವೂ ಶಮನ ಆಗಿದೆ ರಾಧಾ ಮೋಹನ್ ದಾಸ್ ಅಗರವಾಲ್ ಸ್ಪಷ್ಟಪಡಿಸಿದರು.
ಇಂದು ದಾವಣಗೆರೆ ನಡೆದ ಸಭೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮುಂದೆಯೇ ಕೈ ಕೈ ಮಿಲಾಯಿಸುವ ಹಂತಕ್ಕೆ ಉಭಯ ನಾಯಕರ ಸದಸ್ಯರು ಮುಂದಾಗಿದ್ದರು ಎನ್ನಲಾಗಿದೆ. ಜಿಎಂ ಸಿದ್ದೇಶ್ವರ್ ಮತ್ತು ಎಂಪಿ ರೇಣುಕಾಚಾರ್ಯ ಟೀಮ್ ಮಧ್ಯ ಕೈ ಕೈ ಮಿಲಾಯಿಸುವ ಹಂತಕ್ಕೆ ಜಗಳ ಹೋಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಈ ವೇಳೆ ಪ್ರಹ್ಲಾದ್ ಜೋಶಿ, ಮಾಜಿ ಸಚಿವ ಬೈರತಿ ಬಸವರಾಜ್ ತಕ್ಷಣ ಮಧ್ಯ ಪ್ರವೇಶಿಸಿ ಎಲ್ಲರನ್ನೂ ಸಮಾಧಾನಪಡಿಸಿದ್ದಾರೆ. ಅದರಲ್ಲಿಯೂ ಸಿದ್ದೇಶ್ವರ ಬಣದ ಯಶವಂತಾರಾವ್ ಜಾಧವ್ ಮತ್ತು ರೇಣುಕಾಚಾರ್ಯ ಮಧ್ಯ ಜೋರು ಗಲಾಟೆ ಆಗಿತ್ತು ಎಂಬ ಮಾತುಗಳು ಕೇಳಿ ಬಂದಿವೆ.