ದಾವಣಗೆರೆ: ಸಾಲಬಾಧೆಗೆ ಬೇಸತ್ತು ತಾಯಿ-ಮಗಳು ಆತ್ಮಹತ್ಯೆ'
ಮೃತಪಟ್ಟವರನ್ನು ಗಂಗನರಸಿ ಗ್ರಾಮದ ಸುವರ್ಣಮ್ಮ (65) ಮತ್ತು ಅವರ ಮಗಳು ಗೌರಮ್ಮ (45) ಎಂದು ಗುರುತಿಸಲಾಗಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ದೇಹಗಳು ಛಿದ್ರವಾಗಿವೆ.;
By : The Federal
Update: 2025-07-11 04:32 GMT
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ರೈಲ್ವೆ ಸೇತುವೆ ಬಳಿ ತಾಯಿ ಮತ್ತು ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತಪಟ್ಟವರನ್ನು ಗಂಗನರಸಿ ಗ್ರಾಮದ ಸುವರ್ಣಮ್ಮ (65) ಮತ್ತು ಅವರ ಮಗಳು ಗೌರಮ್ಮ (45) ಎಂದು ಗುರುತಿಸಲಾಗಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ದೇಹಗಳು ಛಿದ್ರವಾಗಿವೆ .
ಪ್ರಾಥಮಿಕ ಮಾಹಿತಿಯ ಪ್ರಕಾರ, ಫೈನಾನ್ಸ್ ಸಾಲವನ್ನು ತೀರಿಸಲು ಸಾಧ್ಯವಾಗದೇ ತಾಯಿ-ಮಗಳು ಈ ಕಠಿಣ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಕೆಲವು ವರ್ಷಗಳ ಹಿಂದೆ ಸುವರ್ಣಮ್ಮ ಅವರ ಪತಿ ನಿಧನರಾಗಿದ್ದರು. ಅಂದಿನಿಂದ ಅವರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಅವರಿಗೆ ಇಬ್ಬರು ಹೆಣ್ಣುಮಕ್ಕಳ ಮದುವೆಯಾಗಿದ್ದು, ಮತ್ತೊಬ್ಬ ಮಗಳು ದಿವ್ಯಾಂಗರಾಗಿದ್ದರು.
ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.