ಎಂ.ಎಂ. ಬೆಟ್ಟದಲ್ಲಿ 5 ಹುಲಿಗಳ ಸಾವು: ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಬಿಜೆಪಿ ಸದಸ್ಯ ಜಗ್ಗೇಶ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಅರಣ್ಯ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್, ರಾಜ್ಯ ಸರ್ಕಾರದ ಕಡೆಯಿಂದ ವೈಫಲ್ಯ ನಡೆದಿದೆ ಎಂದು ಬೊಟ್ಟು ಮಾಡಿದ್ದಾರೆ.;

Update: 2025-07-25 04:56 GMT

ಸುಪ್ರೀಂ ಕೋರ್ಟ್‌ 

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ (ಎಂ.ಎಂ.) ಬೆಟ್ಟದ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ವಿಷ ಪ್ರಾಶನದಿಂದ ಮೃತಪಟ್ಟಿರುವ ಘಟನೆಯನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ನ್ಯಾಯಾಲಯ, ಘಟನೆಗೆ ಸಂಬಂಧಿಸಿದಂತೆ ಕೂಡಲೇ ಪ್ರತಿಕ್ರಿಯೆ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು, ದೇಶಾದ್ಯಂತ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷವನ್ನು ತಡೆಯಲು ಸೂಕ್ತ ನೀತಿಯನ್ನು ರೂಪಿಸುವಂತೆ ಕೇಂದ್ರ ಪರಿಸರ ಸಚಿವಾಲಯಕ್ಕೆ ಸೂಚನೆ ನೀಡಿದೆ. ಈ ನೀತಿಯನ್ನು ರೂಪಿಸುವ ಮೊದಲು ಎಲ್ಲಾ ರಾಜ್ಯ ಸರ್ಕಾರಗಳ ಅಭಿಪ್ರಾಯವನ್ನು ಪಡೆಯಬೇಕು ಎಂದು ಪೀಠವು ನಿರ್ದೇಶಿಸಿದೆ.

ರಾಜ್ಯ ಸರ್ಕಾರದ ಲೋಪವೆಂದು ಕೇಂದ್ರ ಆರೋಪ

ಇದೇ ವೇಳೆ, ಐದು ಹುಲಿಗಳ ಸಾವಿನ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಲೋಪವಿದೆ ಎಂದು ಕೇಂದ್ರ ಸರ್ಕಾರವು ಆರೋಪಿಸಿದೆ. ರಾಜ್ಯಸಭೆಯಲ್ಲಿ ಗುರುವಾರ ನಡೆದ ಪ್ರಶೋತ್ತರ ಅವಧಿಯಲ್ಲಿ, ಬಿಜೆಪಿ ಸದಸ್ಯ ಜಗ್ಗೇಶ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಅರಣ್ಯ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್, ರಾಜ್ಯ ಸರ್ಕಾರದ ಕಡೆಯಿಂದ ವೈಫಲ್ಯ ನಡೆದಿದೆ ಎಂದು ಬೊಟ್ಟು ಮಾಡಿದ್ದಾರೆ.

Tags:    

Similar News