ಎನ್‌ಡಿಎ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡದಿರಲು ಸಿಡಬ್ಲುಸಿ ನಿರ್ಧಾರ: ಡಿ.ಕೆ. ಶಿವಕುಮಾರ್
By : The Federal
Update: 2024-06-09 14:08 GMT
ಕೇಂದ್ರದಲ್ಲಿ ವಿರೋಧ ಪಕ್ಷದಲ್ಲಿ ಕಾರ್ಯ ನಿರ್ವಹಿಸಲು ಕಾಂಗ್ರೆಸ್ ಸಿದ್ಧವಾಗಿದ್ದು, ಎನ್‌ಡಿಕೆ ಸರಕಾರದ ಕಾರ್ಯಚಟುವಟಿಕೆಗಳಲ್ಲಿ ಯಾವುದೇ ಹಸ್ತಕ್ಷೇಪ ಮಾಡದಿರಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಎಐಸಿಸಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿದ ಬಳಿಕ ದೆಹಲಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು "ಎನ್ ಡಿಎ ಮೈತ್ರಿಕೂಟ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಹೊಂದಿದ್ದು, ಅವರ ಕಾರ್ಯಚಟುವಟಿಕೆಗಳಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದ ಸ್ಥಾನದಲ್ಲಿ ನಿಂತು ಜನರ ಹಿತಕ್ಕಾಗಿ ಹೋರಾಡಲು ತೀರ್ಮಾನಿಸಿದೆ" ಎಂದು ಸ್ಪಷ್ಟಪಡಿಸಿದ್ದಾರೆ.
ಈ ನಡುವೆ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾಗಿ ಕರ್ನಾಟಕದ ಪಕ್ಷದ ಚಟುವಟಿಕೆಗಳ ವಿವರ ನೀಡಿದರು.