Private Bus Ticket Price| ಬೆಲೆಯೇರಿಕೆ ಪರ್ವ: ಈಗ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಿರ್ಧಾರ

ದರ ಏರಿಸದಿದ್ದರೆ ಖಾಸಗಿ ಬಸ್ ಉದ್ಯಮ ಸ್ಥಗಿತಗೊಳ್ಳುತ್ತದೆ. ಪ್ರತಿ ಬಸ್​ ನಿರ್ವಹಣೆಗೆ ಸದ್ಯ 18 ರಿಂದ 20 ಸಾವಿರ ರೂಪಾಯಿ ಹೆಚ್ಚುವರಿ ಖರ್ಚು ಬರುತ್ತಿದೆ. ಹಾಗಾಗಿ ದರ ಏರಿಸುವುದು ಅನಿವಾರ್ಯ ಎಂದು ಬಸ್ ಮಾಲೀಕರ ಸಂಘದ ರಾಜ್ಯ ಪ್ರಮುಖರು ಹೇಳಿದ್ದಾರೆ.;

Update: 2025-04-08 05:05 GMT

ಖಾಸಗಿ ಬಸ್‌ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆ ಇದೆ. 

ರಾಜ್ಯದಲ್ಲಿ ಇತ್ತೀಚೆಗೆ ಹಾಲು, ವಿದ್ಯುತ್, ಮೆಟ್ರೋ, ಸರ್ಕಾರಿ ಬಸ್ ಪ್ರಯಾಣ ದರ ಏರಿಕೆಯಾಗಿದೆ. ಇದೀಗ ರಾಜ್ಯಾದ್ಯಂತ ಖಾಸಗಿ ಬಸ್​ಗಳ ಟಿಕೆಟ್ ದರ ಹೆಚ್ಚಳ ಮಾಡಲು ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ. ಈ ಬಗ್ಗೆ ಮುಂದಿನ ವಾರವೇ ಅಧಿಕೃತ ಪ್ರಕಟಣೆ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಡೀಸೆಲ್ ದರ ಏರಿಕೆ ಹಾಗೂ ಟೋಲ್ ದರ ಹೆಚ್ಚಳ ಹಿನ್ನೆಲೆಯಲ್ಲಿ ದರ ಏರಿಸಲು ನಿರ್ಧರಿಸಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರತಿ ಲೀಟರ್ ಡೀಸೆಲ್​ ದರ ಸುಮಾರು ಐದು ರೂಪಾಯಿ ಏರಿಕೆಯಾಗಿದೆ. ಟೋಲ್ ದರ ಕೂಡ ಹೆಚ್ಚಾಗಿದೆ. ದರ ಏರಿಸದಿದ್ದರೆ ಖಾಸಗಿ ಬಸ್ ಉದ್ಯಮ ಸ್ಥಗಿತಗೊಳ್ಳುತ್ತದೆ. ಪ್ರತಿ ಬಸ್​ ನಿರ್ವಹಣೆಗೆ ಸದ್ಯ 18 ರಿಂದ 20 ಸಾವಿರ ರೂಪಾಯಿ ಹೆಚ್ಚುವರಿ ಖರ್ಚು ಬರುತ್ತಿದೆ. ಹಾಗಾಗಿ ದರ ಏರಿಸುವುದು ಅನಿವಾರ್ಯ ಎಂದು ಬಸ್ ಮಾಲೀಕರ ಸಂಘದ ರಾಜ್ಯ ಪ್ರಮುಖರು ಹೇಳಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯ್ಕ ತಿಳಿಸಿದ್ದಾರೆ.

ರಾಜ್ಯದ 17 ಜಿಲ್ಲೆಗಳಲ್ಲಿ ಒಟ್ಟು 8,000 ಖಾಸಗಿ ಬಸ್ಸುಗಳಿವೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭವಾದ ನಂತರ ಖಾಸಗಿ ಬಸ್ಸು ಉದ್ಯಮ ನಷ್ಟದಲ್ಲಿದೆ. ಪ್ರಯಾಣಿಕರು ಇಲ್ಲ ಎಂಬ ಕಾರಣಕ್ಕೆ ಬಸ್ ರದ್ದು ಮಾಡುವಂತಿಲ್ಲ, ಹಾಗಾಗಿ ದರ ಏರಿಕೆ ಅನಿವಾರ್ಯವಾಗಿದೆ ಎಂಬುವುದು ಬಸ್ ಮಾಲೀಕರ ಒಕ್ಕೂಟದ ಅಭಿಪ್ರಾಯವಾಗಿದೆ. 

Tags:    

Similar News