Karnataka By-Election | ಕಾಂಗ್ರೆಸ್‌ ಷಡ್ಯಂತ್ರದಿಂದ ಎರಡು ಬಾರಿ ಸೋಲು: ನಿಖಿಲ್‌ ಭಾವುಕ ಭಾಷಣ

ನಾನು ಎರಡು ಚುನಾವಣೆಯಲ್ಲೂ ಪೆಟ್ಟು ತಿಂದಿದ್ದೇನೆ. ಜನ ನನ್ನ ಪರವಾಗಿ ಮತ ಹಾಕಿದ್ದಾರೆ. ಆದರೆ ರಾಜಕೀಯ ಷಡ್ಯಂತ್ರಕ್ಕೆ ನಾನು ಬಲಿಯಾಗಿದ್ದೇನೆ ಎಂದು ನಿಖಿಲ್‌ ಮನವಿ ಮಾಡಿದರು.;

Update: 2024-10-31 12:28 GMT

ಎರಡು ಭಾರಿ ನಾನು ಚುನಾವಣೆಯಲ್ಲಿ ಸೊತ್ತಿದ್ದೇನೆ. ನಾನು ಏನು ತಪ್ಪು ಮಾಡಿದ್ದೇನೆ ಗೊತ್ತಿಲ್ಲ. ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯಮಂತ್ರಿ ಮಗನಾಗಿ ಹುಟ್ಟಿರುವುದೇ ನನ್ನ ದುರದೃಷ್ಟನೋ ಗೊತ್ತಿಲ್ಲ ಎಂದು ಚನ್ನಪಟ್ಟಣದ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಭಾವುಕರಾದರು. 

ಚನ್ನಪಟ್ಟಣ ತಾಲೂಕಿನ ಕನ್ನಮಂಗಲ ಗ್ರಾಮದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಅಂದ್ಕೊಂಡಿದ್ದೆ. ಆದರೆ ಸಾಕಷ್ಟು ನೋವುಗಳಿವೆ ಎಂದು ಭಾಷಣದ ವೇಳೆ ಕಣ್ಣೀರು ಹಾಕಿದರು.

ಕಾಂಗ್ರೆಸ್ ಷಡ್ಯಂತ್ರ; ಆರೋಪ

ನಾನು ಎರಡು ಚುನಾವಣೆಯಲ್ಲೂ ಪೆಟ್ಟು ತಿಂದಿದ್ದೇನೆ. ಜನ ನನ್ನ ಪರವಾಗಿ ಮತ ಹಾಕಿದ್ದಾರೆ. ಆದರೆ ರಾಜಕೀಯ ಷಡ್ಯಂತ್ರಕ್ಕೆ ನಾನು ಬಲಿಯಾಗಿದ್ದೇನೆ. ಬಹಳ ನೋವಿನಲ್ಲಿ ಇದ್ದೇನೆ. ಇವತ್ತು ಪಕ್ಷದ ಕಾರ್ಯಕರ್ತರಿಗೆ ಬೆಲೆ ಕೊಡಬೇಕೆಂದು ಈ ಚುನಾವಣೆಯಲ್ಲಿ ನಿಂತಿದ್ದೇನೆ. ದಯವಿಟ್ಟು ಈ ಭಾರಿ ಈ ಯುವಕನನ್ನು ಗೆಲ್ಲಿಸಿ ಎಂದು ಎಂದು ಮನವಿ ಮಾಡಿದರು.

ಕಳೆದ ಭಾರಿ ಲೋಕ ಸಭೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಹಿ ಘಟನೆಯನ್ನು ನೆನೆಸಿಕೊಂಡು ನನ್ನ ಮೂಲಕ ಉತ್ತರ ಕೊಡ್ಬೇಕು ಅಂತ ಕಾರ್ಯಕರ್ತರ ಭಾವನೆಯಾಗಿತ್ತು. ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಏನಾಗಿತ್ತು ಅಂತ ಎಲ್ಲರಿಗೂ ಗೊತ್ತು ಎಂದರು.

ಆಗ ನಾನು ದೇವೇಗೌಡರಿಗೆ ಸಾಹೇಬರಿಗೆ ಮನವಿ ಮಾಡಿದೆ. ಪ್ರಾದೇಶಿಕ ಪಕ್ಷ ಕಟ್ಟುವುದೇ ಕಷ್ಟ ಇದೇ, ರೈತ ಪರವಾಗಿ ಕಾಳಜಿ ಇಟ್ಟ್ಕೊಂಡು ಈ ಪಕ್ಷ ವನ್ನು ಕಟ್ಟಿದ್ದಾರೆ. ನಂತರ ಕುಮಾರಣ್ಣ ಅವರು ಅಧಿಕಾರ ಇರಲಿ, ಇಲ್ಲದೆ ಇರಲಿ ರೈತರ ಪರವಾಗಿ ನಿರಂತರವಾಗಿ ಸಾಲ ಮನ್ನಾ ಮಾಡಿದ್ದಾರೆ. ಅನೇಕ ಅಭಿವೃದ್ದಿ ಕೆಲಸಗಳು ಮಾಡಿದ್ದಾರೆ ಎಂದರು.

Tags:    

Similar News