ಡಾ. ರಾಜ್​ಕುಮಾರ್​ ಬಗ್ಗೆ ಅವಹೇಳನಕಾರಿ ಪೋಸ್ಟ್: ಕ್ರಮಕ್ಕೆ ಆಗ್ರಹ

ಕುಮಾರ್ ಅವರ ಬಗ್ಗೆ ಮಾತ್ರವಲ್ಲದೆ, ಹಿರಿಯ ನಟಿಯರಾದ ಗೀತಾ ಮತ್ತು ಲಕ್ಷ್ಮಿ ಅವರ ಬಗ್ಗೆಯೂ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂದು ದೂರಲಾಗಿದೆ.;

Update: 2025-08-16 06:39 GMT

ನಟ ಡಾ. ರಾಜ್​​ಕುಮಾರ್​ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಮಂಗಳೂರಿನ ವಿನೋದ್ ಶೆಟ್ಟಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಡಿ. ಅಶೋಕ್ ಒತ್ತಾಯಿಸಿದ್ದಾರೆ. ಇಂತಹ ಕೃತ್ಯಗಳ ಮೂಲಕ ಸಾಮಾಜಿಕ ಜಾಲತಾಣಗಳ ದುರ್ಬಳಕೆಗೆ ಸರ್ಕಾರ ಕಡಿವಾಣ ಹಾಕಬೇಕು ಎಂದೂ ಅವರು ಆಗ್ರಹಿಸಿದ್ದಾರೆ.

ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿ. ಅಶೋಕ್, ವಿನೋದ್ ಶೆಟ್ಟಿ ಕೇವಲ ಡಾ. ರಾಕ್​ಕುಮಾರ್ ಅವರ ಬಗ್ಗೆ ಮಾತ್ರವಲ್ಲದೆ, ಹಿರಿಯ ನಟಿಯರಾದ ಗೀತಾ ಮತ್ತು ಲಕ್ಷ್ಮಿ ಅವರ ಬಗ್ಗೆಯೂ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂದು ದೂರಿದರು. ಈ ಕುರಿತು ಆತನ ವಿರುದ್ಧ ಕೂಡಲೇ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದರು.

ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗುವುದು ಎಂದು ಅಶೋಕ್ ತಿಳಿಸಿದರು. ಈ ಸಂದರ್ಭದಲ್ಲಿ, ಜಯಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಯೋಗಣ್ಣ, ರವೀಂದ್ರಕುಮಾರ್, ಶ್ರೀನಿವಾಸ್, ದೇವರಾಜು, ಜೆ. ನಾರಾಯಣ ಮತ್ತು ಕಾರ್ತಿಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಇದರ ವಿರುದ್ಧ ಕಠಿಣ ಕ್ರಮದ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. 

Tags:    

Similar News