ಪ್ರಜಾಪ್ರಭುತ್ವ ದಿನ 2024 | ರಾಜ್ಯದ ಉದ್ದಗಲ ಒಗ್ಗಟ್ಟಿನ ಮಾನವ ಸರಪಳಿ ಅಭಿಯಾನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೀದರ್‌ನಿಂದ ಚಾಮರಾಜನಗರದವರೆಗೆ ಸುಮಾರು 25 ಲಕ್ಷ ಜನರನ್ನೊಳಗೊಂಡ ಚಾರಿತ್ರಿಕ ಮಾನವ ಚಳವಳಿಯನ್ನು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಸಿದ್ದರಾಮಯ್ಯ ಉದ್ಘಾಟಿಸಿದರು.

Update: 2024-09-15 06:12 GMT
ಮುಖ್ಯಮಂತ್ರಿ ಸಿದ್ದರಾಮಯ್ಯ
Click the Play button to listen to article

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯದಲ್ಲಿ ಹಮ್ಮಿಕೊಂಡಿರುವ ಬೀದರ್‌ನಿಂದ ಚಾಮರಾಜನಗರದವರೆಗಿನ ರಾಜ್ಯದ ಉದ್ದಗಲದ ಬೃಹತ್‌ ಮಾನವ ಸರಪಳಿ ಅಭಿಯಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ(ಸೆ.15) ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಉದ್ಘಾಟಿಸಿದರು.

ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಪ್ಪ, ಪೌರ ಕಾರ್ಮಿಕ ತಾಯಂದಿರಾದ ನಾಗಲಕ್ಷ್ಮಿ, ಮಂಜುಳ ಹಾಗೂ ತೃತೀಯ ಲಿಂಗಿ ಪ್ರಿಯಾಂಕ ಮತ್ತು ಇಬ್ಬರು ವಿಶೇಷ ಚೇತನ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಡ-ಬಲದಲ್ಲಿ ನಿಂತು ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣಗೊಳಿಸಿದರು.

ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ರುದ್ರಪ್ಪ ಲಮಾಣಿ, ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ಯು.ಬಿ.ವೆಂಕಟೇಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.


ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಈ ಬಾರಿ ರಾಜ್ಯದ ಬೀದರ್‌ನಿಂದ ಚಾಮರಾಜನಗರದವರೆಗೆ ಸುಮಾರು 25 ಲಕ್ಷ ಜನರನ್ನೊಳಗೊಂಡ ರಾಜ್ಯದ ಉದ್ದಗಲ ಸುಮಾರು ಎರಡು ಸಾವಿರದ ಐದು ನೂರು ಕಿಮೀ ಉದ್ದದ ಬೃಹತ್‌ ಮಾನವ ಸರಪಳಿ ಅಭಿಯಾನವನ್ನು ಭಾನುವಾರ ನಡೆಸಲಾಯಿತು. ಬೀದರ್‌ನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಅಭಿಯಾನಕ್ಕೆ ಚಾಲನೆ ನೀಡಿದರು. 

ಮಾನವ ಸರಪಳಿ ಹಾದುಹೋಗುವ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಅಭಿಯಾನದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಸಿಬ್ಬಂದಿ ಸೇರಿದಂತೆ 25 ಲಕ್ಷಕ್ಕೂ ಅಧಿಕ ಜನ ಪಾಲ್ಗೊಂಡಿದ್ದರು. ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವ ಕಾಪಾಡುವುದಕ್ಕಾಗಿ ಪ್ರಜಾಪ್ರಭುತ್ವ ಬಲಪಡಿಸುತ್ತೇವೆ ಎಂಬ ಸಂದೇಶದೊಂದಿಗೆ ಈ ಬೃಹತ್‌ ಅಭಿಯಾನವನ್ನು ನಡೆಸಲಾಯಿತು.

Tags:    

Similar News