ಚುನಾವಣಾ ಕರ್ತವ್ಯ ಲೋಪ| ಮಾಗಡಿ ಉಪನ್ಯಾಸಕ ಅಮಾನತು

ಚುನಾವಣಾ ನಿಯಮ ಉಲ್ಲಂಘಿಸುತ್ತಿರುವ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಚುನಾವಣೆ ಕೆಲಸದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಉಪನ್ಯಾಸಕರೊಬ್ಬರನ್ನು ಅಮಾನತು ಮಾಡಲಾಗಿದೆ.

Update: 2024-04-05 12:00 GMT
ಉಪನ್ಯಾಸಕ ಅಮಾನತು

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಚುನಾವಣಾ ತಯಾರಿಗಳು ಭರದಿಂದ ಸಾಗಿವೆ. 

ಈ ಹಂತದಲ್ಲಿ ಚುನಾವಣಾ ನಿಯಮ ಉಲ್ಲಂಘಿಸುತ್ತಿರುವ ಅಧಿಕಾರಿಗಳ ಮೇಲೂ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಚುನಾವಣೆ ಕೆಲಸದಲ್ಲಿ ನಿರ್ಲಕ್ಷ್ಯ ಧೋರಣೆ ತೋರಿಸಿದ ಆರೋಪದ ಮೇಲೆ ಮಾಗಡಿ ತಾಲ್ಲೂಕಿನ ಕುದೂರಿನ ಜಿಪಿಯುಸಿ ಕಾಲೇಜಿನ ಉಪನ್ಯಾಸಕರಾದ ಕುಮಾರ್ ಎಂಬವರನ್ನು ಶುಕ್ರವಾರ ಅಮಾನತು ಮಾಡಲಾಗಿದೆ. ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಉಪನ್ಯಾಸಕ ಕುಮಾರ್ ಅವರನ್ನು ಅಂಚೆ ಮತಪತ್ರ ಸಂಗ್ರಹಣೆ ಕರ್ತವ್ಯಕ್ಕೆ ಮೇಲ್ವಿಚಾರಕರನ್ನಾಗಿ ನೇಮಿಸಲಾಗಿತ್ತು.ಆದರೆ, ಅವರು ಈ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಅಲ್ಲದೇ ಈಚೆಗೆ ತಾಲ್ಲೂಕು ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಗೂ ಗೈರಾಜರಾಗಿದ್ದರು. ಈ ರೀತಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದ್ದಾರೆ. 

Tags:    

Similar News