ದೇವನಹಳ್ಳಿ ಭೂಸ್ವಾಧೀನ ವಾಪಸ್, ಆಂಧ್ರಪ್ರದೇಶದಿಂದ ಏರೋಸ್ಪೇಸ್ ಉದ್ಯಮಿಗಳಿಗೆ ಸ್ವಾಗತ
ರೈತರ ಪ್ರತಿಭಟನೆ ಮತ್ತು ಸೂಕ್ತ ಪರಿಹಾರದ ಬೇಡಿಕೆಗಳ ಹಿನ್ನೆಲೆಯಲ್ಲಿ, ರೈತರ ಹಿತದೃಷ್ಟಿಯಿಂದ ಭೂಸ್ವಾಧೀನ ಪ್ರಕ್ರಿಯೆಯನ್ನು ಮರುಪರಿಶೀಲಿಸಿ ಅದನ್ನು ಹಿಂದಕ್ಕೆ ಪಡೆಯಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿಕೊಂಡಿತು.;
ಕರ್ನಾಟಕ ಸರ್ಕಾರವು ದೇವನಹಳ್ಳಿ ಬಳಿಯ ರೈತರ ಭೂಮಿಯನ್ನು ಏರೋಸ್ಪೇಸ್ ಯೋಜನೆಗಳಿಗಾಗಿ ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಹಿಂದಕ್ಕೆ ಪಡೆದಿದೆ. ಈ ನಿರ್ಧಾರದ ಬೆನ್ನಲ್ಲೇ, ಆಂಧ್ರಪ್ರದೇಶ ಸರ್ಕಾರವು ಏರೋಸ್ಪೇಸ್ ಉದ್ಯಮದಲ್ಲಿ ಹೂಡಿಕೆ ಮಾಡಲು ಇಚ್ಛಿಸುವ ಕಂಪನಿಗಳನ್ನು ತನ್ನ ರಾಜ್ಯಕ್ಕೆ ಆಹ್ವಾನಿಸಿದೆ. ಇದು ಕರ್ನಾಟಕದ ನಿರ್ಧಾರಕ್ಕೆ ಆಂಧ್ರದಿಂದ ಬಂದ ಪರೋಕ್ಷ ಸವಾಲಾಗಿದೆ.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಮಂಗಳವಾರ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ನಿರ್ಧಾರವನ್ನು ಪ್ರೆಕಟಿಸಿತ್ತು. ರೈತರ ಪ್ರತಿಭಟನೆ ಮತ್ತು ಸೂಕ್ತ ಪರಿಹಾರದ ಬೇಡಿಕೆಗಳ ಹಿನ್ನೆಲೆಯಲ್ಲಿ, ರೈತರ ಹಿತದೃಷ್ಟಿಯಿಂದ ಭೂಸ್ವಾಧೀನ ಪ್ರಕ್ರಿಯೆಯನ್ನು ಮರುಪರಿಶೀಲಿಸಿ ಅದನ್ನು ಹಿಂದಕ್ಕೆ ಪಡೆಯಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿಕೊಂಡಿತು.
ಕರ್ನಾಟಕದ ಈ ನಿರ್ಧಾರವು ಏರೋಸ್ಪೇಸ್ ಉದ್ಯಮದಲ್ಲಿ ಹೂಡಿಕೆ ಮಾಡಲು ಯೋಜಿಸಿದ್ದ ಕೆಲವು ಕಂಪನಿಗಳಿಗೆ ಅನಿಶ್ಚಿತತೆ ಸೃಷ್ಟಿಸಿದೆ. ಈ ಅವಕಾಶವನ್ನು ಬಳಸಿಕೊಂಡು, ಆಂಧ್ರಪ್ರದೇಶದ ಉದ್ಯಮ ಸಚಿವ ನಾರಾ ಲೋಕೇಶ್ ಅವರು ಬೆಂಗಳೂರಿನ ಹೊರವಲಯದಲ್ಲಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಗಳನ್ನು ಪ್ರಸ್ತಾಪಿಸಿ "ಏರೋಸ್ಪೇಸ್ ಉದ್ಯಮಗಳು ಆಂಧ್ರಪ್ರದೇಶದ ಕಡೆ ಏಕೆ ಬರಬಾರದು?" ಎಂದು ಎಕ್ಸ್ನಲ್ಲಿ ಪೋಸ್ಟ್ ಪ್ರಕಟಿಸಿದ್ದಾರೆ. .
ನಾರಾ ಲೋಕೇಶ್ ತಮ್ಮ ರಾಜ್ಯದಲ್ಲಿ ಹೂಡಿಕೆ ಮಾಡಲು ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ್ದು, ಏರೋಸ್ಪೇಸ್ ಉದ್ಯಮಕ್ಕಾಗಿ ಬೆಂಗಳೂರಿನ ಹೊರವಲಯದಲ್ಲಿ ಇರುವಂತಹ 8 ಸಾವಿರ ಎಕರೆ ಭೂಮಿ ತಮ್ಮಲ್ಲಿ ಸಿದ್ಧವಿದೆ ಎಂದು ತಿಳಿಸಿದ್ದಾರೆ. ಆಂಧ್ರಪ್ರದೇಶದ ಹೊಸ ಸರ್ಕಾರವು ಉದ್ಯಮ ಸ್ನೇಹಿ ನೀತಿಗಳನ್ನು ಅಳವಡಿಸಿಕೊಂಡಿದ್ದು, ಹೂಡಿಕೆದಾರರಿಗೆ ಉತ್ತಮ ಮೂಲಸೌಕರ್ಯ ಮತ್ತು ಅವಕಾಶಗಳನ್ನು ಒದಗಿಸಲು ಸಿದ್ಧವಿದೆ ಎಂದು ಲೋಕೇಶ್ ಭರವಸೆ ನೀಡಿದ್ದಾರೆ.