ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೊಕ್ಕು ಮುರಿಯಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಿಡಿಕಾರಿದ್ದಾರೆ.
ಚನ್ನಪಟ್ಟಣದಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ, ತಮ್ಮ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರ ಪರ ನಡೆದ ಬೃಹತ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಹಾಸನದ ಪ್ರಕರಣವನ್ನು ಬಳಸಿಕೊಂಡು, ಇಡೀ ದೇವೇಗೌಡರ ಕುಟುಂಬ ಮುಗಿಸಲು ಹುನ್ನಾರ ನಡೆದಿತ್ತು ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು; ಡಿಕೆಶಿ ಅವರಿಗೆ ಅವರ ಮಾತುಗಳೇ ಮುಳುವಾಗಲಿದೆ ಎಂದು ವಾಗ್ದಾಳಿ ನಡೆಸಿದರು.
ಯಡಿಯೂರಪ್ಪ ನಾನು ಒಂದೇ
ಒಂದು ಕಾಲದಲ್ಲಿ ನಾನು ಮತ್ತು ಯಡಿಯೂರಪ್ಪ ಕಿತ್ತಾಡಿದ್ದೆವು. ಆದರೆ, ನಾವಿಬ್ಬರು ಈಗ ಒಂದಾಗಿರುವುದೇ ಈ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೆಸೆಯಲು ಎಂದ ಅವರು, ತಮ್ಮ ಮಗನನ್ನು ಚುನಾವಣೆಗೆ ನಿಲ್ಲಿಸಲು 50 ಕೋಟಿ ರೂ. ಹಣಕ್ಕಾಗಿ ಮಹಾನುಭಾವನೊಬ್ಬನಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪಿ ಸ್ಥಾನದಲ್ಲಿ ಕುಮಾರಸ್ವಾಮಿ ಇದ್ದಾರೆ. ಆದರೆ, ಇದೇ ಚನ್ನಪಟ್ಟಣದ ಮಹಾಜನತೆಯಿಂದಲೇ ಸಿಎಂ ಆಗಿದ್ದ ಕುಮಾರಸ್ವಾಮಿಗೆ ಅಂತಹ ಅನಿವಾರ್ಯತೆ ಇಲ್ಲ. ನಿಖಿಲ್ ಕುಮಾರಸ್ವಾಮಿ ಅವರ ನಮ್ಮ ಅಭ್ಯರ್ಥಿ ಎಂದು 11 ದಿನದ ಹಿಂದೆ ಯಾರು ಹೇಳಿರಲಿಲ್ಲ. ಆದರೆ, 6 ತಿಂಗಳಿನಿಂದ ನಾನೇ ಅಭ್ಯರ್ಥಿ ಎಂದು ಹೇಳಿಕೊಳ್ಳುತ್ತಿದ್ದ ಡಿ.ಕೆ.ಶಿವಕುಮಾರ್ಗೆ ಈಗ ಏನಾಗಿದೆ? ಅವರ ಬದಲು ಮತ್ತೊಬ್ಬರು ಅಖಾಡದಲ್ಲಿದ್ದಾರೆ ಎಂದು ಅವರು ತಿರುಗೇಟು ಕೊಟ್ಟರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು; ಡಿಕೆಶಿ ಅವರಿಗೆ ಅವರ ಮಾತುಗಳೇ ಮುಳುವಾಗಲಿದೆ ಎಂದು ವಾಗ್ದಾಳಿ ನಡೆಸಿದರು.
ಯಡಿಯೂರಪ್ಪ ದಾಳಿ
ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ತಂಡವಾಡುತ್ತಿದೆ. ಭಾಗ್ಯಲಕ್ಷ್ಮಿ ಯೋಜನೆ ನಿಲ್ಲಿಸಿದ್ದಾರೆ. ಅನೇಕ ಜನಪರ ಯೋಜನೆಯನ್ನು ನಿಲ್ಲಿಸಿದ್ದಾರೆ. ಅವರಿಗೆ ಹಣ ಕೊಡುವ ಯೋಗ್ಯತೆ ಇಲ್ಲ ಈ ಕ್ಷೇತ್ರವನ್ನು ಗೆಲ್ಲುವುದಾರ ಮೂಲಕ ಸಿದ್ದರಾಮಯ್ಯಗೆ ಪಾಠವನ್ನು ಕಲಿಸಬೇಕ ಎಂದರು.