ಕಾಂಗ್ರೆಸ್ ಸುಳ್ಳು ಆಶ್ವಾಸನೆಯಿಂದ ಅಭಿವೃದ್ದಿ ಕುಂಠಿತ: ಬಿಎಸ್‌ ಯಡಿಯೂರಪ್ಪ

ಕಾಂಗ್ರೆಸ್ ಸುಳ್ಳು ಆಶ್ವಾಸನೆಯಿಂದ ಅಭಿವೃದ್ದಿ ಕುಂಠಿತವಾಗಿದೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ.;

Update: 2024-04-11 07:30 GMT
ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿಎಸ್‌ ಯಡಿಯೂರಪ್ಪ
Click the Play button to listen to article

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸುಳ್ಳು ಆಶ್ವಾಸನೆಗಳಿಂದಾಗಿ ರಾಜ್ಯದ ಅಭಿವೃದ್ದಿ ಕುಂಠಿತವಾಗಿದೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸುಳ್ಳು ಆಶ್ವಾಸನೆಯಿಂದ ರಾಜ್ಯದ ಅಭಿವೃದ್ದಿ ಕುಂಠಿತವಾಗಿದೆ. ಬಿಜೆಪಿ 400 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಕರ್ನಾಟಕದಲ್ಲಿ ಎಲ್ಲಾ 28 ಸ್ಥಾನಗಳಲ್ಲೂ ಗೆಲುವು ಸಾಧಿಸಲಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರ ಆಶ್ವಾಸನೆ ನೀಡಿದ 10 ಕೆಜಿ ಅಕ್ಕಿಯಲ್ಲಿ ಒಂದು ಕಾಳು ನೀಡದೆ ಇರುವುದು ಸಾಧನೆ. 54 ಲಕ್ಷ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಕೇಂದ್ರ ಮೋದಿ ಸರ್ಕಾರ ಪ್ರತಿ ತಿಂಗಳು 6 ಸಾವಿರ ನೀಡುತ್ತಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ, ಕೇಂದ್ರದ ಮೊತ್ತಕ್ಕೆ 4000 ಸೇರಿಸಿ ಕೊಡುತ್ತಿದ್ದೆ. ಆದರೆ ಅದನ್ನು ಸಿದ್ದರಾಮಯ್ಯ ಸರ್ಕಾರ ನಿಲ್ಲಿಸಿದೆ. ಸರ್ಕಾರ ದಿವಾಳಿಯಾಗಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಆರೋಪಿಸಿದರು.

ಒಂದು ಪ್ರಾರ್ಥಮಿಕ ಆರೋಗ್ಯ ಕೇಂದ್ರ ಕೂಡಾ ಸ್ಥಾಪನೆ ಮಾಡದೆ ಇರುವುದು ಸಿದ್ದರಾಮಯ್ಯ ಸರ್ಕಾರದ ಸಾಧನೆಯಾಗಿದೆ. ಮೋದಿ ಸುಳ್ಳು ಆಶ್ವಾಸನೆ ನೀಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್‌ಗೆ ನೀಡುವ ಮತ ಅರಾಜಕತೆಗೆ ನೀಡುವ ಮತ. ದೇಶದ ಭ್ರಷ್ಟಾಚಾರ, ಅಭದ್ರತೆಗೆ ನೀಡುವ ಮತವಾಗುತ್ತದೆ. ಆಂತರಿಕ ಸುರಕ್ಷತೆಯ ಅಪಾಯಕ್ಕೆ ನಾಂದಿ ಹಾಡುವ ಮತವಾಗುತ್ತದೆ ಎಂದರು.

ದೇಶದಲ್ಲಿ ಮಹಿಳೆಯರಿಗೆ ಶೇ 33 ಮೀಸಲಾತಿಯನ್ನು ಮೋದಿ ಸರ್ಕಾರ ನೀಡಿದೆ. ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್ ಸಂಪರ್ಕ, 14 ಕೋಟಿ ಮನೆಗಳಿಗೆ ಉಚಿತ ನಲ್ಲಿ ನೀರು, 11.88 ಕಿಸಾಸ್ ಸಮ್ಮಾನ್ ಯೋಜನೆ ಅಡಿಯಲ್ಲಿ ರೈತರಿಗೆ ಹಣ, ರಾಷ್ಟ್ರೀಯ ಶಿಕ್ಷಣ ನೀತಿ, 7 ಹೊಸ ಐಐಟಿ ಸ್ಥಾಪನೆ, ಹೊಸ ಕಾಲೇಜು, ವಿವಿ ನಿರ್ಮಾಣ ಆಗಿದೆ. 29,200 ಕಿ ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಿದೆ. ಕಾಶಿ ವಿಶ್ವನಾಥ ದೇವಸ್ಥಾನ, ರಾಮಮಂದಿರ ನಿರ್ಮಾಣ, ಸೋಮನಾಥ ದೇವಾಲಯ ಜೀರ್ಣೋದ್ಧಾರ ಮಾಡಲಾಗಿದೆ. ಆಯುಷ್ಮಾನ್ ಭಾರತ್ ಅಡಿಯಲ್ಲಿ 37 ಕೋಟಿ ಜನರಿಗೆ ವಿಮೆ, ೧೦,000 ಜನೌಷಧಿ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಆರ್ಟಿಕಲ್ 370 ರದ್ದು, ರಕ್ಷಣಾ ವ್ಯವಸ್ಥೆಯಲ್ಲಿ ಆತ್ಮನಿರ್ಭರತೆ, ಒಂದು ಲಕ್ಷ ಕೋಟಿ ರಕ್ಷಣಾ ಸಾಮಗ್ರಿ ಉತ್ಪಾದನೆ ಮಾಡಲಾಗಿದೆ. ಸುರಕ್ಷಿತ ಭಾರತ, ಸರ್ವಾಂಗೀಣ ಅಭಿವೃದ್ದಿ, ಸುದೃಢ ಆರ್ಥಿಕತೆಗಾಗಿ ಮೋದಿ ನಾಯಕತ್ವಕ್ಕೆ ಮತ ನೀಡಬೇಕು ಎಂದು ಅವರು ತಿಳಿಸಿದರು.

Tags:    

Similar News