ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ನಡೆದ ʼಶವ ಶೋಧʼ ಕಾರ್ಯಾಚರಣೆಯಲ್ಲಿ ಎಸ್ಐಟಿ ತಂಡ ಮಹತ್ವದ ಪ್ರಗತಿ ಸಾಧಿಸಿದೆ. ದೂರು ಸಾಕ್ಷಿದಾರ ಗುರುತಿಸಿದ 6 ನೇ ಜಾಗದಲ್ಲಿ ಮನುಷ್ಯನ ಅಸ್ಥಿಪಂಜರ ತ್ತೆಯಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.ನೇತ್ರಾವತಿ ಸೇತುವೆ ಸಮೀಪದ 6ನೇ ಜಾಗದಲ್ಲಿ ಹಿಟಾಚಿ ಯಂತ್ರದ ಬಳಸಿ ಅಗೆಯುತ್ತಿದ್ದಾಗ ಗುಂಡಿಯಲ್ಲಿ ಅಸ್ತಿಪಂಜರ ಪತ್ತೆಯಾಗಿದೆ. ಅಸ್ಥಿಪಂಜರವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ. ಕಳೆದ ಎರಡು ದಿನಗಳಿಂದ ದೂರು ಸಾಕ್ಷಿದಾರ ಗುರುತಿಸಿದ ಸ್ಥಳಗಳಲ್ಲಿ ಗುಂಡಿ ಅಗೆಯುವ ಕಾರ್ಯ ನಡೆಯುತ್ತಿತ್ತು. ಐದು ಜಾಗಗಳಲ್ಲಿ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಆರನೇ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವುದರಿಂದ ಎಸ್ಐಟಿ ತನಿಖೆಗೆ ಮಹ್ವತದ ಸುಳಿವು ಸಿಕ್ಕಂತಾಗಿದೆ. ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಆರನೇ ಜಾಗದ ನಕ್ಷೆ ಪರಿಶೀಲನೆ ನಡೆಸಿದ್ದಾರೆ. ಶವ ಶೋಧ ನಡೆಸುವ ಸ್ಥಳದಲ್ಲಿ ನೇತ್ರಾವತಿ ನದಿ ನೀರಿನ ಒರತೆ ಇದ್ದ ಕಾರಣ, ಗುಂಡಿಯಲ್ಲಿ ನೀರು ತುಂಬಿತು. ನೀರನ್ನು ಹೊರ ತೆಗೆಯಲು ಪಂಪ್ ಸೆಟ್ ತರಿಸಿದ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡರು ಎನ್ನಲಾಗಿದೆ. ಬುಧವಾರವಷ್ಟೇ ಮೊದಲ ಗುಂಡಿಯಲ್ಲಿ ಪಾನ್ ಕಾರ್ಡ್ ಹಾಗೂ ಬ್ಯಾಂಕ್ ಎಟಿಎಂ ಕಾರ್ಡ್ ಪತ್ತೆಯಾಗಿತ್ತು ಎಂದು ಹೇಳಲಾಗಿತ್ತು. ಆದರೆ, ಅಸ್ಥಿಗಳು ಪತ್ತೆಯಾಗಿರಲಿಲ್ಲ.ಮೂರನೇ ದಿನದ ಶೋಧ ಕಾರ್ಯಾಚರಣೆಗೆ ಹಿಟಾಚಿ ಬಳಸಲಾಗಿತ್ತು. ಸಾಕ್ಷಿ ದೂರುದಾರ ಗುರುತಿಸಿದ 13 ಜಾಗಗಳಲ್ಲಿ ಈಗ ಆರು ಜಾಗಗಳಲ್ಲಿ ಶೋಧ ನಡೆಸಲಾಗಿದೆ. ಇನ್ನೂ 7 ಪಾಯಿಂಟ್ಗಳನ್ನು ಅಗೆಯುವುದು ಬಾಕಿ ಇದೆ. ಅಸ್ಥಿಪಂಜರ ವೀಕ್ಷಿಸಲು ಜನಜಂಗುಳಿನೇತ್ರಾವತಿ ಸೇತುವೆ ಬಳಿ ಪತ್ತೆಯಾದ ಅಸ್ಥಿಪಂಜರ ವೀಕ್ಷಿಸಲು ಜನಜಾತ್ರೆಯೇ ಸೇರಿದೆ. ಆದರೆ, ಇದಕ್ಕೆ ಅವಕಾಶ ಕೊಡದ ಎಸ್ಐಟಿ ಅಧಿಕಾರಿಗಳು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಸೂಕ್ಷ್ಮವಾಗಿ ಅಸ್ಥಿಪಂಜರವನ್ನು ಪರೀಕ್ಷೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಅಸ್ಥಿ ಪಂಜರ ದೊರೆತ ಸ್ಥಳದಲ್ಲಿಯೇ ಎಸ್ಐಟಿ ಅಧಿಕಾರಿಗಳು ಸಾಕ್ಷಿ ದೂರುದಾರನಿಂದ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯುತ್ತಿದ್ದಾರೆ.