ಧರ್ಮಸ್ಥಳ ಪ್ರಕರಣ: ದೂರುದಾರ ಭೀಮನನ್ನು ಬೆಂಗಳೂರಿಗೆ ಕರೆತಂದ ಎಸ್ಐಟಿ ಅಧಿಕಾರಿಗಳು?
ಬಂಧನದ ನಂತರ ಎಸ್ಐಟಿ ಕಸ್ಟಡಿಯಲ್ಲಿರುವ ಭೀಮ, ವಿಚಾರಣೆ ವೇಳೆ ತಾನು ಬೆಂಗಳೂರಿನಲ್ಲಿ ಕೆಲವು ಕಾಲ ವಾಸವಿದ್ದಾಗಿ ಮತ್ತು ಕೆಲವರನ್ನು ಭೇಟಿಯಾಗಿದ್ದಾಗಿ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ.;
ಭೀಮನನ್ನು ವಿಶೇಷ ತನಿಖಾ ತಂಡ ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರುತ್ತಿದೆ.
ಬಂಧನದ ನಂತರ ಎಸ್ಐಟಿ ಕಸ್ಟಡಿಯಲ್ಲಿರುವ ಭೀಮ, ವಿಚಾರಣೆ ವೇಳೆ ತಾನು ಬೆಂಗಳೂರಿನಲ್ಲಿ ಕೆಲವು ಕಾಲ ವಾಸವಿದ್ದಾಗಿ ಮತ್ತು ಕೆಲವರನ್ನು ಭೇಟಿಯಾಗಿದ್ದಾಗಿ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ
ಧರ್ಮಸ್ಥಳದಲ್ಲಿ ಸಾಮೂಹಿಕವಾಗಿ ಶವಗಳನ್ನು ಹೂತಿರುವುದಾಗಿ ಆರೋಪಿಸಿ, ಬಳಿಕ ಸುಳ್ಳು ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಪ್ರಕರಣದ ಪ್ರಮುಖ ದೂರುದಾರ ಭೀಮನನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರುತ್ತಿದೆ. ವಿಚಾರಣೆ ವೇಳೆ ಆತ ನೀಡಿದ ಮಾಹಿತಿಗಳ ಆಧಾರದ ಮೇಲೆ, ಬೆಂಗಳೂರಿನಲ್ಲಿ ಸ್ಥಳ ಮಹಜರು ನಡೆಸಲು ಎಸ್ಐಟಿ ಅಧಿಕಾರಿಗಳು ತೀರ್ಮಾನಿಸಿದ್ದಾರೆ.
ಬಂಧನದ ನಂತರ ಎಸ್ಐಟಿ ಕಸ್ಟಡಿಯಲ್ಲಿರುವ ಭೀಮ, ವಿಚಾರಣೆ ವೇಳೆ ತಾನು ಬೆಂಗಳೂರಿನಲ್ಲಿ ಕೆಲವು ಕಾಲ ವಾಸವಿದ್ದಾಗಿ ಮತ್ತು ಕೆಲವರನ್ನು ಭೇಟಿಯಾಗಿದ್ದಾಗಿ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ, ಆತ ಬೆಂಗಳೂರಿನಲ್ಲಿ ಎಲ್ಲೆಲ್ಲಿ ವಾಸವಿದ್ದ, ಯಾರನ್ನೆಲ್ಲಾ ಭೇಟಿಯಾಗಿದ್ದ ಮತ್ತು ಈ ಪ್ರಕರಣದ ಪಿತೂರಿಯಲ್ಲಿ ಅವರ ಪಾತ್ರವೇನು ಎಂಬುದನ್ನು ಪತ್ತೆಹಚ್ಚಲು ಎಸ್ಐಟಿ ಮುಂದಾಗಿದೆ. ಇದಕ್ಕಾಗಿ ಆತನನ್ನು ಬೆಂಗಳೂರಿಗೆ ಕರೆತಂದು, ಆತ ತೋರಿಸಿದ ಸ್ಥಳಗಳಲ್ಲಿ ಮಹಜರು ನಡೆಸಲಾಗುವುದು.
ತಮಿಳುನಾಡಿನಲ್ಲಿ ವಾಸ
ಭೀಮ ಈ ಹಿಂದೆ ತಮಿಳುನಾಡು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಯೂ ವಾಸವಾಗಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹಾಗಾಗಿ, ಎಸ್ಐಟಿ ಅಧಿಕಾರಿಗಳು ಆತನನ್ನು ಆ ಸ್ಥಳಗಳಿಗೂ ಕರೆದೊಯ್ದು ಸ್ಥಳ ಮಹಜರು ನಡೆಸಿ, ಸಾಕ್ಷ್ಯಗಳನ್ನು ಕಲೆಹಾಕುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ಹಿನ್ನೆಲೆ ಮತ್ತು ತನಿಖೆಯ ಪ್ರಗತಿ
ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನದ ಮಾಜಿ ನೈರ್ಮಲ್ಯ ಕೆಲಸಗಾರ ಎಂದು ಹೇಳಿಕೊಂಡಿದ್ದ ಭೀಮ, ತಾನು ದೇವಸ್ಥಾನದ ಆವರಣದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದ. ಈತನ ದೂರಿನ ಅನ್ವಯ, ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿತ್ತು.
ಎಸ್ಐಟಿ ತಂಡವು ಜುಲೈ 28ರಂದು ಆತನನ್ನು ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಿಗೆ ಕರೆದೊಯ್ದು, ಆತ ಗುರುತಿಸಿದ ಸುಮಾರು 13 ಸ್ಥಳಗಳಲ್ಲಿ ಮಹಜರು ನಡೆಸಿತ್ತು. ಆದರೆ, ಹಲವು ದಿನಗಳ ಕಾಲ ಶೋಧ ನಡೆಸಿದರೂ ಹೆಚ್ಚಿನ ಮಾಹಿತಿ ಪತ್ತೆಯಾಗಿರಲಿಲ್ಲ. ಆತನ ಹೇಳಿಕೆಗಳಲ್ಲಿ ವ್ಯತ್ಯಾಸಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ನೀಡಿದ ಆರೋಪದ ಮೇಲೆ ಆಗಸ್ಟ್ 23 ರಂದು ಎಸ್ಐಟಿ ಅಧಿಕಾರಿಗಳು ಆತನನ್ನು ಬಂಧಿಸಿದ್ದರು. ನಂತರ, ನ್ಯಾಯಾಲಯವು ಆತನನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.
ಪಿತೂರಿ ಬಯಲು
ವಿಚಾರಣೆ ವೇಳೆ ಚಿನ್ನಯ್ಯ, ಈ ಸುಳ್ಳು ಆರೋಪಗಳ ಹಿಂದಿರುವ ಕೆಲವು ವ್ಯಕ್ತಿಗಳ ಹೆಸರುಗಳನ್ನು ಬಹಿರಂಗಪಡಿಸಿದ್ದಾನೆ ಎಂದು ವರದಿಯಾಗಿದೆ. ಈತನ ಹೇಳಿಕೆಯ ಹಿಂದೆ ದೊಡ್ಡ ಪಿತೂರಿಯೇ ಅಡಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಎಸ್ಐಟಿ ಆ ನಿಟ್ಟಿನಲ್ಲಿ ತನಿಖೆಯನ್ನು ತೀವ್ರಗೊಳಿಸಿದೆ.