ಧರ್ಮಸ್ಥಳದಲ್ಲಿ ಶವ ಹೂತಿಟ್ಟಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ ಎಸ್ಐಟಿ ಅಧಿಕಾರಿಗಳ ಎದುರು ಸಾಕ್ಷ್ಯ ನುಡಿಯಲು ಆರು ಮಂದಿ ಸ್ಥಳೀಯರು ಮುಂದೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರಿಂದ ದೂರು ಸಾಕ್ಷಿದಾರನಿಗೆ ಹೆಚ್ಚಿನ ಬೆಂಬಲ ಸಿಕ್ಕಂತಾಗಿದೆ.ಎಸ್ಐಟಿ ಅಧಿಕಾರಿಗಳು 13ನೇ ಪಾಯಿಂಟ್ನಲ್ಲಿ ಶೋಧ ಕಾರ್ಯ ಆರಂಭಿಸಿದ ಬೆನ್ನಲ್ಲೇ ದೂರು ಸಾಕ್ಷಿದಾರನ ಪರವಾಗಿ ಆರು ಮಂದಿ ಸ್ಥಳೀಯರು ಬಂದಿದ್ದು, ಶವ ಹೂತು ಹಾಕಿರುವುದನ್ನು ನಾವೂ ನೋಡಿದ್ದೇವೆ ಎಂದು ಹೇಳಿಕೆ ನೀಡಿರುವುದು ಪ್ರಕರಣದಲ್ಲಿ ಸಂಚಲನ ಮೂಡಿಸಿದೆ. 13 ನೇ ಸ್ಥಳದಲ್ಲಿ ಹೆಚ್ಚಿನ ಅಸ್ಥಿಪಂಜರಗಳು ದೊರೆಯಲಿವೆ ಎಂದು ಸಾಕ್ಷಿದಾರ ಹೇಳಿದ್ದ. ದೂರುದಾರ ವ್ಯಕ್ತಿಯು ನೇತ್ರಾವತಿ ನದಿ ಸುತ್ತಮುತ್ತ ಜುಲೈ 28 ರಂದು ಒಟ್ಟು 13 ಸ್ಥಳಗಳನ್ನು ಎಸ್ಐಟಿ ಅಧಿಕಾರಿಗಳ ಸಮ್ಮುಖದಲ್ಲಿ ಗುರುತಿಸಿದ್ದ. ಜುಲೈ 29 ರಂದು 1 ಹಾಗೂ 2ನೇ ಪಾಯಿಂಟ್ನಲ್ಲಿ ಶೋಧಕಾರ್ಯ ಆರಂಭಿಸಿದ್ದ ಎಸ್ಐಟಿ ಅಧಿಕಾರಿಗಳಿಗೆ ಯಾವುದೇ ಕುರುಹು ಸಿಕ್ಕಿರಲಿಲ್ಲ. ಜುಲೈ 3, 4 ಹಾಗೂ 5 ನೇ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆದಿತ್ತು. ಅಲ್ಲಿಯೂ ಯಾವುದೇ ಕಳೇಬರ ಪತ್ತೆಯಾಗಿರಲಿಲ್ಲ. ಆದರೆ, ಜುಲೈ 31 ರಂದು 6ನೇ ಪಾಯಿಂಟ್ನಲ್ಲಿ ಅಸ್ಥಿಪಂಜರ ಪತ್ತೆಯಾಗಿತ್ತು. ಆರನೇ ಪಾಯಿಂಟ್ನಲ್ಲಿ ದೊರೆತ ಅಸ್ಥಿಪಂಜರವನ್ನು ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆ.1ರಂದು 7 ಹಾಗೂ 8ನೇ ಪಾಯಿಂಟ್ ಹಾಗೂ ಆ. 2ರಂದು 9 ಹಾಗೂ 10ನೇ ಪಾಯಿಂಟ್ನಲ್ಲಿ ಅಧಿಕಾರಿಗಳಿಗೆ ಯಾವುದೇ ಕುರುಹುಗಳು ಸಿಕ್ಕಿರಲಿಲ್ಲ. ಆ. 4ರಂದು 11ನೇ ಪಾಯಿಂಟ್ನಲ್ಲಿ ಅಧಿಕಾರಿಗಳು ಶೋಧ ಕಾರ್ಯ ಆರಂಭಿಸುವ ವೇಳೆಗೆ ದೂರುದಾರ ನಿಗದಿತ ಸ್ಥಳದ ಬದಲು ಬಂಗ್ಲಗುಡ್ಡದಲ್ಲಿ ಶೋಧ ಕಾರ್ಯ ಮಾಡಲು ತಿಳಿಸಿದ್ದ. ದೂರುದಾರ ತೋರಿಸಿದ ಸ್ಥಳದಲ್ಲಿ ಶೋಧ ಕಾರ್ಯ ಆರಂಭಿಸಿದಾಗ ಅಸ್ಥಿಪಂಜರದ ನೂರಕ್ಕೂ ಹೆಚ್ಚು ಮೂಳೆಗಳು ಅಧಿಕಾರಿಗಳಿಗೆ ಸಿಕ್ಕಿದ್ದವು. ಇದರಿಂದ ತನಿಖೆಗೆ ಮತ್ತಷ್ಟು ವೇಗ ಸಿಕ್ಕಿತ್ತು. ಸುರಿಯುತ್ತಿದ್ದ ನಿರಂತರ ಮಳೆ ನಡುವೆಯೂ ಎಸ್ಐಟಿ ಅಧಿಕಾರಿಗಳು ಹಿಟಾಚಿ ಯಂತ್ರದ ಮೂಲಕ ಶೋಧ ಕಾರ್ಯ ಮುಂದುವರೆಸಿದ್ದರು.13ನೇ ಪಾಯಿಂಟ್ ಶೋಧ ಕಾರ್ಯ ಮುಗಿದ ನಂತರ ಮುಂದಿನ ತನಿಖೆ ಯಾವ ರೀತಿ ನಡೆಯಬೇಕೆಂದು ಅಧಿಕಾರಿಗಳ ತಂಡ ಸಭೆ ಮಾಡಿ ಚರ್ಚಿಸಿತ್ತು. ಎರಡು ಸ್ಥಳಗಳಲ್ಲಿ ಸಿಕ್ಕ ಅಸ್ಥಿಪಂಜರಗಳನ್ನು ಪ್ರತ್ಯೇಕವಾಗಿ ಇರಿಸಿದ್ದು, ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ.