ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಎಸ್ಐಟಿ ತನಿಖೆ ಹಾಗೂ ಶ್ರೀಕ್ಷೇತ್ರದ ಬಗೆಗಿನ ಅಪಪ್ರಚಾರ ಕುರಿತಂತೆ ವಿಪಕ್ಷ ಹಾಗೂ ಆಡಳಿತ ಪಕ್ಷಗಳ ಸದಸ್ಯರಿಂದಲೇ ವಿರೋಧ ವ್ಯಕ್ತವಾಗಿದ್ದು, ಎಸ್ಐಟಿ ತನಿಖಾ ವರದಿಯ ಕುರಿತು ಇಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಸದನದಲ್ಲಿ ಉತ್ತರ ನೀಡಲಿದ್ದಾರೆ. ಕಳೆದ ಗುರುವಾರ ಸದನದಲ್ಲಿ ಧರ್ಮಸ್ಥಳ ಪ್ರಕರಣ ಕುರಿತು ನಡೆದ ಚರ್ಚೆಯಲ್ಲಿ ಸರ್ಕಾರದ ಉತ್ತರಕ್ಕೆ ವಿಪಕ್ಷಗಳು ಪಟ್ಟು ಹಿಡಿದಿದ್ದವು. ಸೋಮವಾರ (ಆ.೧೮)ಉತ್ತರ ನೀಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದರು. ಈ ಮಧ್ಯೆ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಅವರನ್ನು ಕರೆಸಿಕೊಂಡು ಮಾತುಕತೆ ನಡೆಸಿದ್ದು, ತನಿಖಾ ಪ್ರಗತಿಯ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಎಸ್ಐಟಿ ತನಿಖೆಯ ಈವರೆಗಿನ ಪ್ರಗತಿ, ಸರ್ಕಾರ ಕೈಗೊಂಡ ಮಾಹಿತಿ ಹಾಗೂ ಇನ್ನಿತರೆ ಕ್ರಮಗಳ ಕುರಿತು ಸದನದ ಮುಂದಿಡುವ ಸಾಧ್ಯತೆ ಇದ್ದು, ಪರಸ್ಪರ ವಾಕ್ಸಮರಕ್ಕೆ ಕಾರಣವಾಗುವ ನಿರೀಕ್ಷೆಯಿದೆ. ಧರ್ಮಸ್ಥಳ ಪ್ರಕರಣದ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಇದೊಂದು ಷಡ್ಯಂತ್ರ ಎಂದು ಹೇಳಿದ್ದು, ಇದನ್ನೇ ಅಸ್ತ್ರವಾಗಿಸಿಕೊಂಡು ಪ್ರತಿಪಕ್ಷ ನಾಯಕರು ಸದನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶವ ಹೂತಿಟ್ಟ ಪ್ರಕರಣದಲ್ಲಿ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಸ್ಐಟಿ ಮಧ್ಯಂತರ ವರದಿ ನೀಡುವುದು ಅನುಮಾನ ಎನ್ನಲಾಗಿದೆ. 17 ಸ್ಥಳಗಳಲ್ಲಿ ಕಳೇಬರ ಶೋಧ ನಡೆಸಿದರೂ ಎರಡರಲ್ಲಿ ಮಾತ್ರ ಮೂಳೆಗಳು ಸಿಕ್ಕಿದ್ದು, ಉಳಿದಂತೆ ಯಾವುದೇ ಕುರುಹು ಪತ್ತೆಯಾಗಿಲ್ಲ. ಹಾಗಾಗಿ ದೂರು ಸಾಕ್ಷಿದಾರ ತೋರಿಸುತ್ತಿರುವ ಪ್ರತಿ ಜಾಗವನ್ನು ಶೋಧಿಸಲಾಗುತ್ತಿದೆ. ಅಲ್ಲದೇ ವೈಜ್ಞಾನಿಕವಾಗಿ ಕಾರ್ಯಾಚರಣೆ ನಡೆಸಲು ಜಿಪಿಆರ್ ಬಳಸಲಾಗಿದೆ. ಈ ಮಧ್ಯೆ, ದಿನಕ್ಕೊಂದು ದೂರು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸುವ ಅಗತ್ಯವಿದೆ. ಹೀಗಿರುವ ತನಿಖಾ ಹಂತದಲ್ಲಿ ಯಾವುದೇ ಮಾಹಿತಿ ಸೋರಿಕೆಯಾಗದಂತೆ ನೋಡಿಕೊಳ್ಳಲು ಮಧ್ಯಂತರ ವರದಿ ನೀಡಲು ನಿರಾಕರಿಸಲಾಗಿದೆ ಎನ್ನಲಾಗಿದೆ. ಭಾನುವಾರಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಎಸ್ಐಟಿ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ಅವರು ಮಧ್ಯಂತರ ವರದಿ ನೀಡಿದರೆ ಸದನದ ಮುಂದಿಡಲಾಗುವುದು. ಇಲ್ಲವಾದಲ್ಲಿ ಒತ್ತಡ ಹೇರುವುದಿಲ್ಲ ಎಂದು ಹೇಳಿದ್ದರು.