ಧರ್ಮಸ್ಥಳ ಸಾವಿನ ಪ್ರಕರಣ: ಎಸ್​ಐಟಿ ರಚನೆಗೆ ಮಹಿಳಾ ಆಯೋಗ ಮನವಿ

ಜುಲೈ 12ರಂದು ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳ ಪ್ರಕಾರ, ಒಂದು ತಲೆಬುರುಡೆ ದೊರೆತಿದ್ದು, ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆಯ ಬಗ್ಗೆ ಕುಟುಂಬದವರ ಹೇಳಿಕೆಯೂ ಗಮನಾರ್ಹವಾಗಿದೆ.;

Update: 2025-07-14 13:58 GMT

ಧರ್ಮಸ್ಥಳದಲ್ಲಿ ನಡೆದಿರಬಹುದಾದ ಮಹಿಳೆಯರ ಮೇಲಿನ ದೌರ್ಜನ್ಯ, ಹತ್ಯೆ, ಅತ್ಯಾಚಾರ ಮತ್ತು ನಾಪತ್ತೆ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.


ಇತ್ತೀಚೆಗೆ ಟೈಮ್ಸ್ ನೌ ಮತ್ತಿತರ ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳ ಪ್ರಕಾರ, ಒಬ್ಬ ವ್ಯಕ್ತಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿ ಧರ್ಮಸ್ಥಳ ಪ್ರದೇಶದಲ್ಲಿ ಕಳೆದ 20 ವರ್ಷಗಳಲ್ಲಿ ನೂರಾರು ಶವಗಳನ್ನು ಭೂಮಿಯಲ್ಲಿ ಹೂತು ಇಡಲಾಗಿದೆ ಎಂದು ಆರೋಪಿಸಿದ್ದಾರೆ. ಇದರಲ್ಲಿ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಗಳ ಸಾಧ್ಯತೆಯೂ ಇದೆ ಎಂದು ವರದಿಯಾಗಿದೆ.

ತಲೆಬುರುಡೆ ಪತ್ತೆ, ನಾಪತ್ತೆ ಪ್ರಕರಣಗಳ ಹೆಚ್ಚಳ

ಜುಲೈ 12ರಂದು ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳ ಪ್ರಕಾರ, ಒಂದು ತಲೆಬುರುಡೆ ದೊರೆತಿದ್ದು, ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆಯ ಬಗ್ಗೆ ಕುಟುಂಬದವರ ಹೇಳಿಕೆಯೂ ಗಮನಾರ್ಹವಾಗಿದೆ. ಮಹಿಳಾ ಆಯೋಗವು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್ ಠಾಣೆಗಳು ಈ ಹಿಂದಿನ ನಾಪತ್ತೆ ಮತ್ತು ಸಾವು ಪ್ರಕರಣಗಳಿಗೆ ಸೂಕ್ತವಾಗಿ ಸ್ಪಂದಿಸಿಲ್ಲ ಎಂಬ ಗಂಭೀರ ಆರೋಪಗಳನ್ನೂ ಗುರುತಿಸಿದೆ.

ಕಳೆದ 20 ವರ್ಷಗಳಲ್ಲಿ ಧರ್ಮಸ್ಥಳ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವರದಿಯಾಗಿರುವ ನಾಪತ್ತೆಯಾದ ಮಹಿಳೆಯರು, ವಿದ್ಯಾರ್ಥಿನಿಯರು, ಅಸ್ವಾಭಾವಿಕ ಸಾವು, ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳ ಸಮಗ್ರ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್​ಐಟಿ ರಚನೆಯ ಅಗತ್ಯವಿದೆ ಎಂದು ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. 

Tags:    

Similar News