ಧರ್ಮಸ್ಥಳ ಪ್ರಕರಣ| ತನಿಖೆ ಆರಂಭಕ್ಕೂ ಮುನ್ನ ಪೂರ್ವಗ್ರಹ ತೀರ್ಮಾನ ಸರಿಯಲ್ಲ: ಖಾದರ್‌

ಹಿರಿಯ ಐಪಿಎಸ್‌ ಅಧಿಕಾರಿ ಪ್ರಣವ್‌ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿ ತಂಡ ರಚಿಸಿದೆ. ಸಮರ್ಪಕ ತನಿಖೆ ನಡೆದು ಸತ್ಯ ಸಂಗತಿ ಹೊರಬಂದು, ಕಾನೂನು ಕ್ರಮ ಕೈಗೊಳ್ಳಲಿ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್‌ ತಿಳಿಸಿದ್ದಾರೆ.;

Update: 2025-07-21 07:58 GMT

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್‌

ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ತನಿಖೆ ಆರಂಭಕ್ಕೂ ಮುನ್ನವೇ ಪೂರ್ವಾಗ್ರಹ ತೀರ್ಮಾನ ಸರಿಯಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ತಿಳಿಸಿದ್ದಾರೆ. 

ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಿರಿಯ ಐಪಿಎಸ್‌ ಅಧಿಕಾರಿ ಪ್ರಣವ್‌ ಮೊಹಂತಿ ನೇತೃತ್ವದಲ್ಲಿ ನಾಲ್ವರು ಐಪಿಎಸ್‌ ಅಧಿಕಾರಿಗಳ ಎಸ್‌ಐಟಿ ತಂಡ ರಚಿಸಿದೆ. ಸಮರ್ಪಕ ತನಿಖೆ ನಡೆದು ಸತ್ಯ ಸಂಗತಿ ಹೊರಬಂದು, ಕಾನೂನು ಕ್ರಮ ಕೈಗೊಳ್ಳಲಿ. ಆದರೆ, ತನಿಖೆ ಆರಂಭಕ್ಕೂ ಮುನ್ನವೇ ತೀರ್ಮಾನಕ್ಕೆ ಬರಬಾರದು. ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ಕೆಲಸವಾಗಬಾರದು. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ತಿಳಿಸಿದರು. 

ಧರ್ಮಸ್ಥಳದ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಸರ್ಕಾರ ಎಸ್‌ಐಟಿ ರಚಿಸಬೇಕೆಂದು ಹೈಕೋರ್ಟ್‌ ವಕೀಲರು, ನಿವೃತ್ತ ನ್ಯಾಯಮೂರ್ತಿಗಳು, ಮಹಿಳಾ ಆಯೋಗ ಹಾಗೂ ಸಿನಿಮಾ ರಂಗದಿಂದ ಒತ್ತಡ ಹೆಚ್ಚಾದ ಹಿನ್ನೆಲೆ ರಾಜ್ಯ ಸರ್ಕಾರ ಭಾನುವಾರ (ಜು.20)  ಎಸ್‌ಐಟಿ ರಚಿಸಿತ್ತು. ಸರ್ಕಾರದ ಈ ಕ್ರಮಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದ್ದು ಶ್ರೀಕ್ಷೇತ್ರ ಧರ್ಮಸ್ಥಳವೂ ಸ್ವಾಗತಿಸಿದೆ. 

Tags:    

Similar News