Cauvery Water Dispute| ತಮಿಳುನಾಡಿಗೆ ಪ್ರತಿದಿನ 1 ಟಿಎಂಸಿ ನೀರು; ಕಾನೂನು ತಜ್ಞರ ಜತೆ ಸರ್ಕಾರ ಚರ್ಚೆ

“ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.;

Update: 2024-07-12 10:15 GMT
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌

“ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾನೂನು ತಜ್ಞರ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳ ಜತೆ  ಚರ್ಚೆ ನಡೆಸಲಾಗುತ್ತಿದೆ ಎಂದು  ಜಲಸಂಪನ್ಮೂಲ ಸಚಿವರೂ ಆಗಿರುವ  ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಪ್ರಾಧಿಕಾರದ ತೀರ್ಮಾನದ ವಿಚಾರವಾಗಿ ಪತ್ರಿಕಾ ಪ್ರತಿನಿಧಿಗಳ ಜತೆ ಮಾತನಾಡಿದ ಅವರು  “ಕಾವೇರಿ ನೀರಿನ ವಿಚಾರವಾಗಿ ಮುಂದೆ ಏನು ಮಾಡಬೇಕು ಎಂದು ಅನಿಲ್ ದಿವಾನ್, ಕಾತರಕಿ ಸೇರಿದಂತೆ ಕಾನೂನು ತಜ್ಞರ ತಂಡ ಜತೆ ಚರ್ಚೆ ಮಾಡಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸುತ್ತೇವೆ” ಎಂದು ತಿಳಿಸಿದರು.

 ಪ್ರತಿ ದಿನ ತಮಿಳುನಾಡಿಗೆ 1 ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ಗುರುವಾರದಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ಕಳೆದ ವರ್ಷ ಭೀಕರ ಬರಗಾಲದ ಪರಿಣಾಮ ಸಾಕಷ್ಟು ತೊಂದರೆ ಅನುಭವಿಸಬೇಕಾಯಿತು. ಬೆಂಗಳೂರು ಒಂದು ಕಡೆಯೇ  7 ಸಾವಿರಕ್ಕೂ ಹೆಚ್ಚು ಬೋರ್ ವೆಲ್ ಗಳು ಬತ್ತಿ ಹೋಗಿದ್ದವು, ಆದರೂ ನೀರಿನ ತೊಂದರೆ ಉಂಟಾಗದಂತೆ ಪರಿಸ್ಥಿತಿ ನಿಭಾಯಿಸಲಾಯಿತು. ಈ ವರ್ಷ ಉತ್ತಮ ಮಳೆಯಾಗುತ್ತಿದ್ದು ನೀರಿನ ತೊಂದರೆಯಾಗುವುದಿಲ್ಲ ಎನ್ನುವ ನಂಬಿಕೆಯಿದೆ” ಭರವಸೆ ವ್ಯಕ್ತಪಡಿಸಿದರು

Tags:    

Similar News