ವಂಚನೆ ಪ್ರಕರಣ | ಐಶ್ವರ್ಯಾ ಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿ ಕೆ ಸುರೇಶ್ ದೂರು
ಬೆಂಗಳೂರಿನ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಜುವೆಲ್ಲರಿ ಶಾಪ್ ಮಾಲೀಕರಾದ ವನಿತಾ ಐತಾಳ್ಗೆ ನಾನು ಡಿಕೆ.ಸುರೇಶ್ ಸಹೋದರಿ ಎಂದು ಐಶ್ವರ್ಯಾ ಗೌಡ ಕೋಟಿ, ಕೋಟಿ ರೂ. ವಂಚನೆ ಮಾಡಿರುವುದು ಸಂಚಲನ ಸೃಷ್ಟಿಸಿದೆ.
ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಜುವೆಲ್ಲರಿ ಶಾಪ್ ಮಾಲೀಕರಾದ ವನಿತಾ ಐತಾಳ್ ಅವರಿಗೆ ಎಸಗಿರುವ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ನಮ್ಮ ಹೆಸರು ದುರುಪಯೋಗಪಡಿಸಿಕೊಂಡಿದ್ದಾರೆಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಜಿ ಸಂಸದ ಡಿ ಕೆ ಸುರೇಶ್ ಪತ್ರ ಬರೆದಿದ್ದಾರೆ.
ಡಿಕೆ ಸುರೇಶ್ ದೂರಿನಲ್ಲೇನಿದೆ?
ಐಶ್ವರ್ಯಾ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗಪಡಿಸಿಕೊಂಡು ಹಲವಾರು ಜನರಿಗೆ ಚಿನ್ನದ ಆಭರಣ ಹಾಗೂ ಹಣವನ್ನು ವಂಚಿಸುತ್ತಿರುವುದಾಗಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದೆ. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ವಂಚನೆ ಮಾಡಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಇಂತಹ ಅನ್ಯಾಯಗಳು ಆಗದಂತೆ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ಪತ್ರದ ಮೂಲಕ ಡಿಕೆ ಸುರೇಶ್ ಆಗ್ರಹಿಸಿದ್ದಾರೆ.
ಬೆಂಗಳೂರಿನ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಜುವೆಲ್ಲರಿ ಶಾಪ್ ಮಾಲೀಕರಾದ ವನಿತಾ ಐತಾಳ್ ಅವರಿಗೆ ತಾನು ಡಿಕೆ.ಸುರೇಶ್ ಸಹೋದರಿ ಎಂದು ಐಶ್ವರ್ಯಾ ಗೌಡ ಕೋಟಿ ಕೋಟಿ ರೂ. ವಂಚನೆ ಮಾಡಿರುವ ಪ್ರಕರಣ ಸಂಚಲನ ಸೃಷ್ಟಿಸಿದೆ. ಚಿನ್ನದಂಗಡಿಯ ವನಿತಾ ದೂರಿನ ಮೇಲೆ ಐಶ್ವರ್ಯಾಗೆ ನೋಟಿಸ್ ಕೊಡಲಾಗಿತ್ತು.
ಇತ್ತೀಚೆಗೆ ಚಂದ್ರಾ ಲೇಔಟ್ ಪೊಲೀಸರ ಮುಂದೆ ಹಾಜರಾದ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಹರೀಶ್ನನ್ನ ವಿಚಾರಣೆ ಮಾಡಿದ್ದರು. ವಂಚನೆ ಸಂಬಂಧ ಮಹತ್ವದ ದಾಖಲೆ ಮುಂದಿಟ್ಟು ವಿಚಾರಣೆ ವೇಳೆ ಸೂಕ್ತ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಇಬ್ಬರನ್ನು ಅರೆಸ್ಟ್ ಮಾಡಿದ್ದರು. ಇಂದು ಚಂದ್ರಾ ಲೇಔಟ್ ಠಾಣೆ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಐಶ್ವರ್ಯಾ, ಹರೀಶ್ಗೆ ಜನವರಿ 6ರವರೆಗೂ ಪೊಲೀಸ್ ಕಸ್ಟಡಿಗೆ ನೀಡಿ 4ನೇ ಎಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.