Karnataka By-Election | ಹೈಕಮಾಂಡ್‌ ಸೂಚಿಸಿದರೆ ಚನ್ನಪಟ್ಟಣದಿಂದ ಸ್ಪರ್ಧೆಗೆ ಸಿದ್ಧ; ಡಿ.ಕೆ.ಸುರೇಶ್‌

ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಲು ಕಾಯಕರ್ತರು ಹಾಗೂ ಮುಖಂಡರು ಒತ್ತಡ ಹೇರುತ್ತಿದ್ದು,ಹೈಕಮಾಂಡ್‌ ಸೂಚಿಸಿದರೆ ಸ್ಪರ್ಧೆ ಎದುರಿಸುತ್ತೇನೆ ಎಂದು ಡಿ.ಕೆ.ಸುರೇಶ್‌ ಹೇಳಿದ್ದಾರೆ

Update: 2024-10-20 13:24 GMT

ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವಂತೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಂದ ಒತ್ತಡವಿದೆ. ಆದರೆ, ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಭಾನುವಾರ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಚನ್ನಪಟ್ಟಣ ತಾಲೂಕಿನ ಮುಖಂಡರು, ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಅಭ್ಯರ್ಥಿ ಆಯ್ಕೆ ವಿಚಾರವಾಗಿ ಪಕ್ಷದ ಬದ್ಧರಿರುವುದಾಗಿ ಎಲ್ಲರೂ ಹೇಳಿದ್ದಾರೆ. ಸ್ಪರ್ಧಿಸುವಂತೆ ನನ್ನ ಮೇಲೂ ಒತ್ತಡ ಹೇರಿದ್ದಾರೆ ಎಂದು ಹೇಳಿದರು.

ಅಭ್ಯರ್ಥಿಗಿಂತಲೂ ಹೆಚ್ಚಾಗಿ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಲು ಇಚ್ಛಿಸುತ್ತೇನೆ. ನನಗೆ ಅವಕಾಶ ನೀಡುವಂತೆ ಪಕ್ಷದ ಮುಖಂಡರನ್ನು ನಾನೂ ಸಹ ಕೇಳಿದ್ದೇನೆ. ಎರಡು ಮೂರು ದಿನಗಳಲ್ಲಿ ವರಿಷ್ಡು ಏನೇ ನಿರ್ಧಾರ ಕೈಗೊಂಡರೂ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಪಾಲಿಸುತ್ತೇವೆ ಎಂದರು.

ನ. 13 ರಂದು ಸಂಡೂರು, ಶಿಗ್ಗಾವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಚನ್ನಪಟ್ಟಣ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಮೈತ್ರಿ ಪಕ್ಷಗಳ ನಾಯಕರ ಪ್ರಕಾರ ಜೆಡಿಎಸ್‌ ತನ್ನ ಅಭ್ಯರ್ಥಿ ಘೋಷಿಸಲಿದೆ. ಯೋಗಿಶ್ವರ್‌ ಅವರನ್ನೇ ಜೆಡಿಎಸ್‌ ಚಿಹ್ನೆಯಡಿ ಕಣಕ್ಕಿಳಿಸಬಹುದು ಎಂಬ ವರದಿಗಳೂ ಇವೆ ಎಂದು ಹೇಳಿದರು.

Tags:    

Similar News