ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ, ಡಿಕೆಶಿ ಮೇಲೆ ಆರೋಪ
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕೋರ್ಟ್‌ಗೆ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಿದೆ. ಹೆಚ್ಚುವರಿ ಜಾರ್ಜ್‌ಶೀಟ್‌ನಲ್ಲಿ ಡಿಕೆ ಬ್ರದರ್ಸ್ ಹೆಸರು ಉಲ್ಲೇಖಿಸಲಾಗಿದೆ.;
ಡಿಕೆ ಶಿವಕುಮಾರ್
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಿದ್ದು, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ 2.5 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಆರೋಪಿಸಿದೆ.
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಕೂಡ ದೇಣಿಗೆ ನೀಡಿದ್ದಾರೆ ಎಂದು ಇಡಿ ಹೇಳಿದೆ, ಇದು ಹೈಕಮಾಂಡ್ ಸೂಚನೆ ಮೇರೆಗೆ ನಡೆದಿದೆ ಎಂದು ಅದು ಆರೋಪಿಸಿದೆ. ಈ ಹಿಂದೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ 142 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಇಡಿ ಆರೋಪಿಸಿತ್ತು.
ಡಿಕೆಶಿ ಸಮರ್ಥನೆ
ವಿಜಯಪುರ ಜಿಲ್ಲೆಯ ಕೊಲ್ಲಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಹಣಕಾಸು ನೆರವು ನೀಡಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. "ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಮ್ಮ ಪಕ್ಷದ್ದು. ಪಕ್ಷದ ಪತ್ರಿಕೆಗೆ ಫಂಡ್ ಕೊಟ್ಟಿದ್ದೇವೆ. ಕೊಟ್ಟರೆ ಏನು ತಪ್ಪು?" ಎಂದು ಅವರು ಪ್ರಶ್ನಿಸಿದ್ದಾರೆ.
ಪ್ರಕರಣದ ಹಿನ್ನೆಲೆ
ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಅವರು ತಲಾ ಶೇ. 38ರಷ್ಟು ಷೇರು ಹೊಂದಿದ್ದರು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಸಾಲವನ್ನು ಕಾಂಗ್ರೆಸ್ ಪಕ್ಷದ ಹಣದಿಂದ ತೀರಿಸಿ, ಖರೀದಿಗಾಗಿ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ (ವೈಐಎಲ್) ಸ್ಥಾಪಿಸಿದ್ದರು ಎಂದು $2012$ ರಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಆರೋಪಿಸಿ ದೂರು ದಾಖಲಿಸಿದ್ದರು. ಇದುವೇ ಈ ಪ್ರಕರಣಕ್ಕೆ ಮೂಲವಾಗಿದೆ.