ಡಿಆರ್‌ಡಿಒದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, 67 ಸಾವಿರ ರೂ. ಸಂಬಳ

ಕನಿಷ್ಠ 28ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬಿ.ಇ, ಬಿ.ಟೆಕ್, ಎಂ.ಟೆಕ್, ಎಂಎಸ್ಸಿ ಕೋರ್ಸ್‌ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ.

Update: 2025-10-07 06:28 GMT

ಸಾಂದರ್ಭಿಕ ಚಿತ್ರ

Click the Play button to listen to article

ಕೇಂದ್ರ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಡಿಫೆನ್ಸ್ ಇನ್ ಸ್ಟಿಟ್ಯೂಟ್ ಆಫ್ ಬಯೋ ಡಿಫೆನ್ಸ್ ಟೆಕ್ನಾಲಜೀಸ್ ಸಂಸ್ಥೆಯಲ್ಲಿ ಖಾಲಿ ಇರುವ 11 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಯಾವ್ಯಾವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡಿಫೆನ್ಸ್ ಇನ್ ಸ್ಟಿಟ್ಯೂಟ್ ಆಫ್ ಬಯೋ ಡಿಫೆನ್ಸ್ ಟೆಕ್ನಾಲಜೀಸ್ (DRDO DIBT) ವಿಭಾಗದಲ್ಲಿ ಜೆಆರ್‌ಎಫ್, ರಿಸರ್ಚ್ ಅಸೋಸಿಯೇಟ್‌ನ 11 ಹುದ್ದೆಗಳಿಗೆ ಆಪ್‌ಲೈನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅ.28 ಕೊನೆಯ ದಿನಾಂಕವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಮೈಸೂರಿನಲ್ಲಿ ಕೆಲಸ ನಿರ್ವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.  

ವಯೋಮಿತಿ ಹಾಗೂ ವಿದ್ಯಾರ್ಹತೆ

ಕನಿಷ್ಠ 28ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬಿ.ಇ, ಬಿ.ಟೆಕ್, ಎಂ.ಟೆಕ್, ಎಂಎಸ್ಸಿ ಕೋರ್ಸ್‌ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 67 ಸಾವಿರ ರೂ. ಸಂಬಳ ನಿಗದಿಪಡಿಸಲಾಗಿದೆ. 

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ drdo.gov.in ವೆಬ್‌ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿದ ಬಳಿಕ, ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು Chief Director, DIBT-DRDO, Siddarthanagar, Mysuru-570011 ವಿಳಾಸಕ್ಕೆ ಅ.28 ರೊಳಗೆ ಕಳುಹಿಸಬೇಕು ಎಂದು ತಿಳಿಸಿದೆ. 

Tags:    

Similar News